Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
    Viral

    ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.

    vartha chakraBy vartha chakraFebruary 27, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.27:
    ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್‌ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಲೋಕಾರ್ಪಣೆಗೊಳಿಸಿದೆ.
    ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ ನಡೆದ ಡಿಸ್ಕಾಂಗಳ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮದ ಭಾಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಸಿ. ಸೀಲಿಂಗ್ ಫ್ಯಾನ್ ಅನ್ನು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌.ಶಿವಶಂಕರ್‌ ಅನಾವರಣಗೊಳಿಸಿದರು.
    ಬಳಿಕ ಮಾತನಾಡಿದ ಅವರು “ಬೇಸಿಗೆ ಆರಂಭದಲ್ಲೇ ಬಿ.ಎಲ್‌.ಡಿ.ಸಿ. ಫ್ಯಾನ್‌ಗಳನ್ನು ಬಿಡುಗಡೆ ಮಾಡಿ, ಬಳಕೆಗೆ ಗ್ರಾಹಕರನ್ನು ಉತ್ತೇಜಿಸಲಾಗುತ್ತಿದೆ. ಸಾಮಾನ್ಯ ಫ್ಯಾನ್‌ಗಳಿಗಿಂತ ಅತಿ ಕಡಿಮೆ ವಿದ್ಯುತ್ ಬಳಸಿಕೊಳ್ಳುವಂತೆ ಈ ಫ್ಯಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ ವಿದ್ಯುತ್ ಬೇಡಿಕೆ ಕಡಿತಗೊಳಿಸುವ ನಮ್ಮ ಈ ಪ್ರಯತ್ನ ಗ್ರಾಹಕರ ವಿದ್ಯುತ್ ವೆಚ್ಚವನ್ನೂ ಕಡಿಮೆ ಮಾಡಲಿದೆ. ಸುಸ್ಥಿರ ಹಾಗೂ ಇಂಧನ ದಕ್ಷತೆಯ ಭವಿಷ್ಯಕ್ಕೆ ಇದು ಮಹತ್ವದ ಹೆಜ್ಜೆಯಾಗಿದೆ,” ಎಂದು ಹೇಳಿದರು.
    “ಇಂಧನ ದಕ್ಷತೆಯೆಡೆಗಿನ ನಮ್ಮ ಪ್ರಯತ್ನವು ಪಾಲುದಾರರ ಸಹಕಾರವಿಲ್ಲದೇ ಸಾಧ್ಯವಾಗುತ್ತಿರಲಿಲ್ಲ. ಆ ನಿಟ್ಟಿನಲ್ಲಿ ಬಿಇಇ, ಕ್ರೆಡಲ್, ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್‌ಸಿ) ಹಾಗೂ ಇನ್ನಿತರ ಪಾಲುದಾರರ ಪ್ರೋತ್ಸಾಹದೊಂದಿಗೆ ಇದನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದು ಹೇಳಿದರು
    ವಿದ್ಯುತ್ ಬಳಕೆಯಲ್ಲಿ ಜಾಗೃತಿ ಹಾಗೂ ಸುಸ್ಥಿರ ನಾಳೆಗಾಗಿ, ನಾವು ಒಂದಾಗಿ ನಡೆಯಬೇಕಿದೆ,” ಎಂದು ತಿಳಿಸಿದರು
    ಕ್ರೆಡಲ್ ವ್ಯವಸ್ಥಾಪಕ ನಿರ್ದೆಶಕ ಕೆ.ಪಿ.ರುದ್ರಪ್ಪಯ್ಯ ಮಾತನಾಡಿ, “ಒಂದು ಯೂನಿಟ್ ವಿದ್ಯುತ್‌ ಉಳಿಸಿದರೆ, ಎರಡು ಯೂನಿಟ್ ವಿದ್ಯುತ್‌ ಉತ್ಪಾದಿಸಿದಂತೆ. ವಿದ್ಯುತ್ ಉತ್ಪಾದನೆ ಎಷ್ಟು ಮುಖ್ಯವೋ, ಅದನ್ನು ಸಂರಕ್ಷಿಸುವುದೂ ಅಷ್ಟೇ ಮುಖ್ಯವಾಗುತ್ತದೆ ಎಂದರು
    ದೇಶದಲ್ಲಿ ಮೊದಲ ಬಾರಿಗೆ ವಿದ್ಯುತ್ ಸಂರಕ್ಷಣೆ ಮತ್ತು ದಕ್ಷತೆ ನೀತಿ-2022-27 ಜಾರಿಗೊಳಿಸಿದ ಹೆಮ್ಮೆ ಕರ್ನಾಟಕದ್ದು . ಈ ನೀತಿಯು 744 ಬಿಲಿಯನ್ ಕಿಲೋ ವ್ಯಾಟ್ ಅವರ್ ವಿದ್ಯುತ್ ಉಳಿತಾಯ ಜತೆಗೆ 6 ಲಕ್ಷ ಟನ್ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆ ತಡೆಯುವ ಗುರಿ ಹೊಂದಿದೆ,” ಎಂದು ತಿಳಿಸಿದರು.
    ಇಂಧನ ದಕ್ಷತೆ ಹಾಗೂ ಸಂರಕ್ಷಣೆಯ ಗುರಿ ತಲುಪಲು ವಿವಿಧ ವಲಯಗಳಿಗೆ ಗುರಿಗಳನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಬೆಸ್ಕಾಂ ಸಾಧನೆ ಮಹತ್ವದ್ದಾಗಿದೆ. ಬಿ.ಎಲ್‍.‍‍‍ಡಿ.ಸಿ. ಫ್ಯಾನ್‌ಗಳ ಬಳಕೆ ಹೆಚ್ಚಬೇಕಿದ್ದು, ವಿದ್ಯುತ್ ಉಳಿತಾಯ ಪ್ರಯತ್ನಗಳು ನಮ್ಮಿಂದಲೇ ಆರಂಭವಾಗಲಿ,” ಎಂದರು.
    ಪಿ.ಡ್ಲ್ಯೂ.ಸಿ. ಭಾರತದ ಕ್ಲೀನ್ ಎನರ್ಜಿ ವಿಭಾಗದ ಮುಖ್ಯಸ್ಥರಾದ ರಾಜೀವ್ ರಲ್ಹಾನ್ ಮಾತನಾಡಿ, ” ಸದ್ಯ ಬಳಕೆಯಲ್ಲಿರುವ ಹಳೆಯ ತಂತ್ರಜ್ಞಾನದ ಫ್ಯಾನ್‌ಗಳಿಗೆ ಹೋಲಿಸಿದರೆ ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆಯಿಂದ ಶೇಕಡ 50ರಷ್ಟು ವಿದ್ಯುತ್ ಬಳಕೆ ಕಡಿಮೆಗೊಳಿಸಬಹುದಾಗಿದೆ. ಬಿ.ಎಲ್.ಡಿ.ಸಿ. ಫ್ಯಾನ್ ಬಳಕೆ ಉತ್ತೇಜಿಸುತ್ತಿರುವ ಸರ್ಕಾರದ ಜತೆ ಸಹಕರಿಸಲು ಹೆಮ್ಮೆಯಾಗುತ್ತಿದೆ,” ಎಂದು ಹೇಳಿದರು.
    ಇಇಎಸ್‌ಎಲ್ ರಾಜ್ಯ ಮುಖ್ಯಸ್ಥರಾದ ದೀಪಕ್ ಸಹನಿ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ. ರಮೇಶ್‌, ಬೆಸ್ಕಾಂ ಡಿಎಸ್‌ಎಂ ಪ್ರಧಾನ ವ್ಯವಸ್ಥಾಪಕರಾದ ರಮೇಶ್ ವಿ.ಎಸ್., ಪಿಎಂಎಸ್ ನಿರ್ದೇಶಕರಾದ ಅಮೇಯ ಸುಬೋಧ್ ಉದ್ಘಾಂವ್ಕರ್ ಸೇರಿದಂತೆ ಬೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    Verbattle
    Verbattle
    Verbattle
    ಕರ್ನಾಟಕ ತಂತ್ರಜ್ಞಾನ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು
    Next Article ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Tqclwh on February 13, 2026 3:57 pm

      betmgm Hawaii betmgm-play betmgmontario

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • LinwoodGah on ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.