ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿ ಸ್ಥಾನದಲ್ಲಿರುವ ಸಚಿವ ಈಶ್ವರಪ್ಪರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು. ಅವರನ್ನು ತಕ್ಷಣವೇ ಸಂಪುಟ ದಿಂದ ವಜಾಗೊಳಿಸ ಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಈ ಸಂಬಂಧ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವ ನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪ್ರಮುಖ ನಾಯಕರ ನಿಯೋಗ ರಾಜ್ಯಪಾಲರನ್ನು ಭೇಟಿಮಾಡಿ, ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಮನವಿ ಸಲ್ಲಿಸಿತು.
ಈ ವೇಳೆ ಮಾತನಾಡಿದ ಮುಖಂಡರು, ಸಂತೋಷ್ ಪಾಟೀಲ್ ಬಿಜೆಪಿ ಕಾರ್ಯಕರ್ತ. ಗ್ರಾಮೀಣಾಭಿವೃದ್ಧಿ ಸಚಿವರ ಬಳಿ ರಸ್ತೆ ಕೆಲಸ ಮಾಡುತ್ತಿದ್ದರು. ಈಶ್ವರಪ್ಪ ಹೆಚ್ಚು ಕಮೀಷನ್ ಡಿಮ್ಯಾಂಡ್ ಮಾಡಿದ್ದಾರೆಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಸ್ಪಷ್ಟವಾಗಿ ನಮೂದಿಸಿದ್ದಾರೆ. ಹಾಗಾಗಿ ಈಶ್ವರಪ್ಪನವರನ್ನ ಬಂಧಿಸಬೇಕು, ಸಂಪುಟದಿಂದ ಮೊದಲು ವಜಾಮಾಡಬೇಕು ಎಂದು ಒತ್ತಾಯಿಸಿದರು.
ಆತ್ಮಹತ್ಯೆಯಾಗಿರುವ ವ್ಯಕ್ತಿ ತನ್ನ ಸಾವಿಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು. ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
Previous Articleಈಶ್ವರಪ್ಪ ವಿರುದ್ಧ ಎಫ್ ಐ ಆರ್..
Next Article ಸಂತೋಷ್ ಸಾವಿಗೆ ಈಶ್ವರಪ್ಪ ಎಷ್ಟು ಹೊಣೆ…