Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.
    Trending

    ಎರಡನೇ ವಿಮಾನ ನಿಲ್ದಾಣದ ಜಾಗ ಪೈನಲ್.

    vartha chakraBy vartha chakraAugust 6, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಂಗಳವಾರ ಅಥವಾ ಬುಧವಾರ ಚರ್ಚಿಸಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೋಮವಾರ ಇಲ್ಲಿ ನಡೆದ ನಿರ್ಣಾಯಕ ಸಭೆಯಲ್ಲಿ ತೀರ್ಮಾನಿಸಲಾಗಿದೆ.
    ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಅವರು ವೀಕ್ಷಿಸಿದರು.
    ನಂತರ ಮಾತನಾಡಿದ ಇಬ್ಬರೂ ನಾಯಕರು, ‘ನೂತನ ವಿಮಾನ ನಿಲ್ದಾಣಕ್ಕೆ ಐಡೆಕ್ ಸಂಸ್ಥೆಯು 9 ಜಾಗಗಳನ್ನು ಗುರುತಿಸಿದೆ. ಈ ಪೈಕಿ ಎರಡು ಸ್ಥಳಗಳನ್ನು ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದೆ. ಉಳಿದ ಸ್ಥಳಗಳ ಮಾಹಿತಿಯೊಂದಿಗೆ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕಳಿಸಲಾಗುವುದು. ಇದಕ್ಕೂ ಮೊದಲು ಮುಖ್ಯಮಂತ್ರಿಗಳ ಜತೆ ಅಂತಿಮ ಚರ್ಚೆ ನಡೆಸಲಾಗುವುದು’ ಎಂದರು.
    ವಿಮಾನ ನಿಲ್ದಾಣಕ್ಕೆ ಯಾವ ಜಾಗ ಸೂಕ್ತ ಎನ್ನುವುದನ್ನು ಬೆಂಗಳೂರು ಮತ್ತು ಕರ್ನಾಟಕದ ಹಿತದೃಷ್ಟಿಯಿಂದ ತೀರ್ಮಾನಿಸಲಾಗುವುದು. ಇದರಲ್ಲಿ ರಾಜಕೀಯ ಏನೂ ಇರುವುದಿಲ್ಲ. ಪ್ರಾಧಿಕಾರವು 15 ಮಾನದಂಡಗಳನ್ನು ಇಟ್ಟುಕೊಂಡಿದ್ದು, ಅದರಂತೆ ನಿರ್ಧಾರವಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
    ಶಿವಕುಮಾರ್ ಮಾತನಾಡಿ, ನೂತನ ವಿಮಾನ ನಿಲ್ದಾಣದ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಈಗಾಗಲೇ ಹತ್ತಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ. ಬೆಂಗಳೂರು ನಗರದ ಅಭಿವೃದ್ಧಿ, ಅವಕಾಶ ಮತ್ತು ಪ್ರಯಾಣಿಕರು ಹಾಗೂ ಸರಕು ಸಾಗಣೆ ಒತ್ತಡ ಪರಿಗಣಿಸಿ, ಮುಂದಿನ ಹೆಜ್ಜೆ ಇಡಲಾಗುವುದು ಎಂದು ನುಡಿದರು.
    ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಸಿಂಗ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಬಿಎಂಆರ್ ಡಿ ಆಯುಕ್ತ , ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಕೊರ್ಲಪಟಿ, ಕೆಎಸ್ಎಸ್ಐಡಿಸಿ ಎಂ.ಡಿ.ಸತೀಶ ಮುಂತಾದವರು ಇದ್ದರು.

    Verbattle
    Verbattle
    Verbattle
    Bangalore ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ
    Next Article ವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ioaqnf on ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    • Fcgwxn on ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಅಧಿಕಾರಿ ಕತೆ ನೋಡಿ
    • Kieyra on ಈ ಸಾವು ನ್ಯಾಯವೇ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.