ಬೆಂಗಳೂರು,ನ. 27-
ವಿಧಾನಸಭೆ ಉಪElection ಮುಗಿಯುತಿದ್ದಂತೆ ಪರಾದ್ಯ ಸಚಿವ ಸಂಪುಟ ಪುನಾರಚನೆ ಕುರಿತಂತೆ ಚರ್ಚೆಗಳು ಆರಂಭಗೊಂಡಿದೆ. ಎ ಐ ಸಿ ಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ಕುರಿತಾದ ಚರ್ಚೆಗೆ ಮತ್ತಷ್ಟು ರೆಕ್ಕೆ ಪುಕ್ಕ ಬಂದಿದೆ.
ಸಚಿವ ಸಂಪುಟ ಪುನಾರಚನೆ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ನಾಮಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ನೀವು ವೇಳೆ ಚರ್ಚೆ ನಡೆಯುತ್ತಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತಂತೆಯೂ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ.
ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನ ತೋರೆಯುವುದಾಗಿ ಹೇಳಿದ್ದು ಇದೀಗ ತಮ್ಮ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ.
ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಕುರಿತಂತೆ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಮಾತುಕತೆ ನಡೆಸಿದ್ದು ಎಐಸಿಸಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.
ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎಂಬ ಸುದ್ದಿಯು ಹೊರಬೀಳುತ್ತಿದ್ದಂತೆ ಈ ಸ್ಥಾನಕ್ಕೆ ನೇಮಕಗೊಳ್ಳಲು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಹಲವರು ಲಾಬಿ ಆರಂಭಿಸಿದ್ದಾರೆ.