Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೈತಿಕ ಪೊಲೀಸ್ ಗಿರಿ ಮಾಡಿದರೆ ಗಡಿಪಾರು | Karnataka Police
    ಅಪರಾಧ

    ನೈತಿಕ ಪೊಲೀಸ್ ಗಿರಿ ಮಾಡಿದರೆ ಗಡಿಪಾರು | Karnataka Police

    vartha chakraBy vartha chakraJuly 23, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,.22- ನೈತಿಕ ಪೊಲೀಸ್ ಗಿರಿ ವಿರುದ್ಧ ಗೃಹ ಇಲಾಖೆ ಸಮರ ಸಾರಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ
    ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ.

    ಭಜರಂಗದಳ ಕಾರ್ಯಕರ್ತರಾದ ಬಾಲು ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಸೇರಿ ಮೂವರು ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
    ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್​ಗಿರಿಯಲ್ಲಿ ಭಾಗಿಯಾಗಿದ್ದ ಬಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ.
    ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್​ ನೀಡಿದೆ. ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾ‌ನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್‌ಗೆ ಮೂವರು ಉತ್ತರ ನೀಡಿದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ.

    ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
    ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಪರಾಧಿಕ ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಹಿನ್ನಲೆಯುಳ್ಳ ಆತನ ಸಹಚರರಿಂದ ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.

    ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಬರುವ ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್‌ ನಲ್ಲಿ ತಿಳಿಸಲಾಗಿದೆ

    Karnataka karnataka news Karnataka Police KSP lic Police police news ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleTraffic problem ಇದ್ದರೆ ಹೀಗೆ ಮಾಡಿ | Bengaluru Traffic
    Next Article Congress ಸರ್ಕಾರದಲ್ಲಿ BJP ವಕೀಲರ ದರ್ಬಾರ್!
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • australia cigerettes deliery on ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • лучшие адвокаты москвы по уголовным делам on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Buyprivateproxy on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe