Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
    Trending

    ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!

    vartha chakraBy vartha chakraJune 13, 202435 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.13:
    ಮನುಕುಲವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಎಚ್.ಐ.ವಿ.ವೈರಸ್ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿತ್ತು.ಜನ ಸಾಮಾನ್ಯರಲ್ಲಿ ಈ ಬಗ್ಗೆ ಅರಿವು,ಮುಂಜಾಗ್ರತೆ ಹಾಗೂ ಆಧುನಿಕ ಚಿಕಿತ್ಸಾ ವಿಧಾನಗಳ ಪರಿಣಾಮವಾಗಿ ಈ ವೈರಸ್ ಹರಡುವ ಪ್ರಮಾಣದ ಕಡಿಮೆಯಾಗುತ್ತಾ ಸಾಗಿದೆ.
    ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದರ ಪರಿಣಾಮ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತ ಸಾಗುತ್ತಿದೆ.
    ಕರ್ನಾಟಕ ಏಡ್ಸ್ ನಿಯಂತ್ರಣ ಸಂಸ್ಥೆಯ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಶೇ 15 ರಿಂದ 20 ರಷ್ಟು ಯುವಕರಲ್ಲಿಯೇ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.
    ಅದರಲ್ಲಿಯೂ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನವರಲ್ಲಿಯೂ ಈಗ ಹೆಚ್ಚಾಗಿ ಎಚ್ಐವಿ ಕಂಡುಬರುತ್ತಿದೆ. ರಾಜ್ಯದಲ್ಲಿ ಬೆಂಗಳೂರು ಮಾತ್ರವಲ್ಲದೆ ಕೋಲಾರ ಬೆಳಗಾವಿ, ಧಾರವಾಡ, ತುಮಕೂರು ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅತಿಯಾದ ಮಾದಕ ವ್ಯಸನ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹೆಚ್ಚಾಗಿ ಏಡ್ಸ್ ಕಾಣಿಸಿಕೊಳ್ಳುತ್ತಿದೆ.
    ಎಚ್ಐವಿ ಸೋಂಕಿತರು ಅತಿ ಹೆಚ್ಚು ಬೆಂಗಳೂರು ನಗರದಲ್ಲಿಯೇ ಪತ್ತೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಅದರಲ್ಲೂ ಅವಿವಾಹಿತರಲ್ಲಿಯೇ ಎಚ್ಐವಿ ಸೋಂಕು ಹೆಚ್ಚಾಗುತ್ತಿದೆ. ಮದುವೆಗೂ ಮುನ್ನವೇ ಯುವಕರಲ್ಲಿ ಎಚ್ಐವಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 1.85 ಲಕ್ಷ ಸೋಂಕಿತರಿದ್ದಾರೆ. ಇದರಲ್ಲಿ ನವವಿವಾಹಿತರೇ ಹೆಚ್ಚಿದ್ದಾರೆ.
    ಬೆಂಗಳೂರು ಸೇರಿದಂತೆ ಹಲವು ಪ್ರದೇಶದಲ್ಲಿ ‌ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು ಎಚ್.ಐ.ವಿ.ಹೆಚ್ಚಳಕ್ಕೆ ಇದು ಪ್ರಮುಖ ಕಾರಣ ಎನ್ನಲಾಗುತ್ತಿದೆ.ಡ್ರಗ್ಸ್ ವ್ಯಸನಿಗಳು ಸಿರಿಂಜ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವ ಪರಿಪಾಠ ಹೆಚ್ಚುತ್ತಿರುವುದರ ಜೊತೆಗೆ ಅಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ ಕೂಡ ಇದಕ್ಕೆ ಕಾರಣ ಎನ್ನಲಾಗುತ್ತಿದೆ
    ವಿಶ್ವಾದ್ಯಂತ ಸುಮಾರು 40 ದಶಲಕ್ಷಕ್ಕೂ ಅಧಿಕ ಜನ ಈ ಸೋಂಕು ಪೀಡಿತರಾಗಿದ್ದಾರೆ. ಸರ್ಕಾರವೂ ಇದರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡುತ್ತಲೇ ಇದೆ. ಆದರೆ ಜನರ ಜಾಗೃತಿ ಕೊರತೆ, ಏಡ್ಸ್ ಬಗ್ಗೆ ಕಡಿಮೆಯಾಗುತ್ತಿರುವ ಭಯ ಈಗ ಮತ್ತೆ ಯುವಕರಲ್ಲಿ ಏಡ್ಸ್ ಏರಿಕೆಗೆ ಕಾರಣವಾಗಿದೆ.

    Verbattle
    Verbattle
    Verbattle
    Bangalore News Trending Varthachakra ಆರೋಗ್ಯ ಡ್ರಗ್ಸ್ ತುಮಕೂರು ಧಾರವಾಡ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    Next Article ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಯಾರೇ.. ಕೂಗಾಡಲಿ…
    • LeonardReawn on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.