Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.
    Bengaluru

    ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.

    vartha chakraBy vartha chakraDecember 3, 202423 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಒಂದು ಬಾರಿ ಪರಿಹಾರ ಎಂಬ ವಿನೂತನ ಕ್ರಮಗಳ ಮೂಲಕ ಬಾಕಿ ಉಳಿದಿರುವ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದ
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಆಸ್ತಿ ತೆರಿಗೆ ಪಾವತಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಜ್ಜುಗೊಂಡಿದೆ.
    ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟಲ್​ಮೆಂಟ್ ಗಡುವು ಮುಗಿದಿರುವ ಬೆನ್ನಲ್ಲೇ ತೆರಿಗೆ ಪಾವತಿಸದವರ ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.
    ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಪಾವತಿಸುವಂತೆ ಪಾಲಿಕೆ ಆಸ್ತಿಗಳ ಮಾಲೀಕರಿಗೆ
    ಮೂರು ಹಂತದ ನೋಟಿಸ್ ನೀಡಿದರೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದರೆ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಬಾಕಿ ತೆರಿಗೆ ವಸೂಲಿಗೆ ಪಾಲಿಕೆಯು ತೀವ್ರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಸಾಕಷ್ಟು ಅವಕಾಶ ಕೊಟ್ಟರೂ ಬಾಕಿ ತೆರಿಗೆ ಕಟ್ಟಿಲ್ಲ. ಜೊತೆಗೆ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯ ಗಡುವು ಸಹ ಮುಕ್ತಾಯಗೊಂಡಿದೆ. ಆದರೂ ತೆರಿಗೆ ಕಟ್ಟದವರಿಗೆ ಡಿಸೆಂಬರ್ 1ರಿಂದ ಬಡ್ಡಿ ಮತ್ತು ಆಸ್ತಿ ಹರಾಜು ಅಸ್ತ್ರ ಪ್ರಯೋಗಿಸಲಾಗುತ್ತದೆ ಎಂದು ಬಿಬಿಎಂಪಿ ಆಡಳಿತ ಮಂಡಳಿ ತಿಳಿಸಿದೆ.
    ಈವರೆಗೆ ನಗರದಲ್ಲಿ ನಗರದಲ್ಲಿ ಓಟಿಎಸ್ ಮೂಲಕ ಶೇ.60 ರಷ್ಟು ಜನರು ಮಾತ್ರ ತೆರಿಗೆ ಪಾವತಿಸಿದ್ದಾರೆ. ಅವಕಾಶ ನೀಡಿದರೂ ಕೂಡಾ ಶೇ.40 ರಷ್ಟು ಜನರು ತೆರಿಗೆ ಪಾವತಿಸಿಲ್ಲ. ಅಂತಹವರಿಗೆ ದುಪ್ಪಟ್ಟು ದಂಡದ ಜತೆಗೆ ತೆರಿಗೆ ವಸೂಲಿ ಮಾಡಲು ಪಾಲಿಕೆ ಮುಂದಾಗಿದೆ.
    ಬಾಕಿ ತೆರಿಗೆಗೆ ಬಾಕಿ ಉಳಿಸಿಕೊಂಡಷ್ಟೇ ದಂಡವನ್ನು ಪಾಲಿಕೆ ವಿಧಿಸಲಿದೆ. ತೆರಿಗೆ ಪಾವತಿ ಸಂಬಂಧ ಡಿಸೆಂಬರ್ ತಿಂಗಳಲ್ಲಿ ಮೂರು ಹಂತದಲ್ಲಿ ನೋಟಿಸ್ ನೀಡಲಾಗುತ್ತಿದೆ. ಮೊದಲ ನೋಟಿಸ್‌ಗೆ ಬಾಕಿ ಪಾವತಿಸಿದರೆ ದಂಡ ಮಾತ್ರ ವಸೂಲಿ ಆಗಲಿದೆ. ಎರಡನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿ ತೆರಿಗೆಗೆ ಶೇ.15 ರಷ್ಟು ಬಡ್ಡಿ ಬೀಳಲಿದೆ. ಮೂರನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿಗೆ ಶೇ.25 ರಷ್ಟು ಬಡ್ಡಿ ವಸೂಲಿ ಆಗಲಿದೆ. ಅಲ್ಲದೇ ಮೂರು ನೋಟಿಸ್‌ಗೂ ತೆರಿಗೆ ಪಾವತಿಸದಿದ್ದರೆ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಮೊರೆಗೆ ಪಾಲಿಕೆ ಹೋಗಲಿದೆ.
    ಈವರೆಗೆ 3,751ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲಾಗಿದ್ದು, 4 ಸಾವಿರ ಕೋಟಿ ರೂಪಾಯಿ ಗುರಿ ಮುಟ್ಟಲು ಇಲ್ಲಿಯವರೆಗೂ ಪಾಲಿಕೆಗೆ ಸಾಧ್ಯವಾಗಿಲ್ಲ. ಆಸ್ತಿ ತೆರಿಗೆ ಪಾವತಿ ಮಾಡದ ಕಾರಣಕ್ಕಾಗಿ ಈವರೆಗೆ 6,381 ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕಿ ಸೀಜ್ ಮಾಡಲಾಗಿದೆ.
    ಬಾಕಿ ತೆರಿಗೆ ಪಾವತಿಗೆ ಬಿಬಿಎಂಪಿ ಹಲವು ಅವಕಾಶ ನೀಡಿದರೂ ಕೂಡ ತೆರಿಗೆ ಪಾವತಿದಾರರು ನಿರ್ಲಕ್ಷ್ಯ ವಹಿಸುತ್ತಿದ್ದು, ಸದ್ಯ ಕಠಿಣ ಕ್ರಮಕ್ಕೆ ಪಾಲಿಕೆ ಮುಂದಾಗಿದೆ.

    Verbattle
    Verbattle
    Verbattle
    Bengaluru ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೈಂಗಿಕ ಕೆಲಸ ಇಲ್ಲಿ ಸುರಕ್ಷಿತ!
    Next Article ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Ynhrck on ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    • Glennhof on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.