Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಚ್ಚಿ ಬಿದ್ದ ಬೀದರ್
    Viral

    ಬೆಚ್ಚಿ ಬಿದ್ದ ಬೀದರ್

    vartha chakraBy vartha chakraJanuary 16, 2025594 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೀದರ್,ಜ.16-
    ಗಡಿ ಜಿಲ್ಲೆ ಬೀದರ್ ನ ಹೃದಯ ಭಾಗ ಶಿವಾಜಿ ಚೌಕ್ ನಲ್ಲಿ ಹಾಡ ಹಗಲೇ ಎಟಿಎಂ ಗೆ ಹಣ ತುಂಬಲು ಬಂದ ವಾಹನದ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ವ್ಯಕ್ತಿ ಒಬ್ಬರನ್ನು ಹತ್ಯೆಗೈದು ಹಣ ದೊಂದಿಗೆ ಪರಾರಿಯಾಗಿದ್ದಾರೆ.
    ಶಿವಾಜಿ ಚೌಕದಲ್ಲಿರುವ ಎಸ್ ಬಿ ಐ ಕಚೇರಿ ಮುಂದಿನ ಎಟಿಎಂ ಗೆ ಹಣ ತುಂಬಲು ವಾಹನದಲ್ಲಿ
    ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಆಗಮಿಸಿದ್ದರು.ಈ ವೇಳೆ ಹೋಂಚು ಹಾಕಿ ಕಾದು ಕುಳಿತಿದ್ದ ದುಷ್ಕರ್ಮಿಗಳು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ.
    ಗುಂಡಿನ ದಾಳಿಯಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಒಬ್ಬರು ಸ್ಥಳದಲ್ಲೇ ಮೃತ ಪಟ್ಟರೆ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ
    ಎಟಿಎಂ ಗೆ ಹಣ ತುಂಬಲು ವಾಹನ ಬರುವುದನ್ನು ಖಚಿತಪಡಿಸಿಕೊಂಡು ಕಾದು ಕುಳಿತಿದ್ದ ದುಷ್ಕರ್ಮಿಗಳು ವಾಹನ ಬರುತ್ತಿದ್ದಂತೆ ಮೊದಲಿಗೆ
    ಬ್ಯಾಂಕ್ ಹಾಗೂ ಎಟಿಎಂಗೆ ಹಣ ಹಾಕುವ ಪಿಎಸ್‌ಸಿ ವಾಹನದ ಮೇಲೆ ದಾಳಿ ಮಾಡಿ, ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಈ ವೇಳೆ ತಮ್ಮನ್ನು ಹಿಡಿಯಲು ಬಂದ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
    ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ.
    ಬೀದರ್ ನ ಅತ್ಯಂತ ಜನನಿಬಿಡ ಪ್ರದೇಶ ಎಂದು ಗುರುತಿಸಲಾಗುವ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ ಎಟಿಎಂ ವಾಹನದ ಮೇಲೆ ಕಾರದಪುಡಿ ಮತ್ತು ಬಂದೂಕಿನಿಂದ ದಾಳಿ ಮಾಡಿದ ದುಷ್ಕರ್ಮಿಗಳು
    ಆ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗುತ್ತಿರುವುದನ್ನು ಕಂಡ ಸ್ಥಳೀಯರು ಕಲ್ಲು ತೂರಿ, ದುರ್ಷರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಿಲ್ಲ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
    ಬೈಕ್ ಪತ್ತೆಗೆ ಶೋಧ:
    ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಅವರನ್ನು ಚಿಕಿತ್ಸೆಗಾಗಿ ಬೀದರ್ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಹ ಅಸುನೀಗಿದ್ದಾರೆ.
    ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬಿಸಿದ್ದಾರೆ. ಬೈಕ್ ನಂಬರ್ ಕಲೆ ಹಾಕುತ್ತಿದ್ದಾರೆ.
    ಇಬ್ಬರು ಮುಸುಕುಧಾರಿಗಳು ಸಿಬ್ಬಂದಿಗಳ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    ಕಲೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    Next Article ಶಿವಕುಮಾರ್ ವಿರುದ್ಧ ಎಲ್ಲರೂ ಒಟ್ಟಾಗುತ್ತಿದ್ದಾರಾ..?
    vartha chakra
    • Website

    Related Posts

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    February 10, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • JamesAbnon on ತೇಜಸ್ವಿನಿ ಅನಂತಕುಮಾರ್, ಮಾಳವಿಕ ಅವಿನಾಶ್ ಗೆ BJP ಟಿಕೆಟ್ | Malavika Avinash | Tejaswini Ananth Kumar | BJP
    • LeonardReawn on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.