ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಈಶ್ವರಪ್ಪ ಬಂಧಿಸುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ಹಾಗು ಗ್ರಾಮಾಂತರ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಶಾಸಕರಾದ ಡಾ.ಯತೀಂದ್ರ,ತನ್ವೀರ್ಸೇಠ್, ಅನಿಲ್ ಚಿಕ್ಕಮಾಧು, ಹೆಚ್.ಪಿ.ಮಂಜುನಾಥ್ ಸೇರಿದಂತೆ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಶಾಸಕ ತನ್ವೀರ್ಸೇಠ್ , ಸರ್ಕಾರದ ನ್ಯೂನ್ಯತೆ ಮುಚ್ಚಲು ಬಿಜೆಪಿ ಜನರನ್ನು ದಾರಿ ತಪ್ಪಿಸುತ್ತಿದೆ. ಬಿಜೆಪಿ ತನ್ನ ಅಂಗ ಸಂಸ್ಥೆಗಳನ್ನು ಬಳಸಿಕೊಂಡು ಜನರ ದಾರಿ ತಪ್ಪಿಸುತ್ತಿದೆ. ಇದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೂ ಮುನ್ನ ಮಾಜಿ ಸಚಿವ ಈಶ್ವರಪ್ಪ ಹೆಸರು ಬರೆದಿದ್ದಾರೆ. ಅವರ ರಾಜೀನಾಮೆ ಆಗ್ರಹಿಸಿ ಮಾಡಿದ ಧರಣಿಗೆ ಅವರ ರಾಜೀನಾಮೆ ಆಗಿದೆ. ಈಶ್ವರಪ್ಪ ವಜಾಗೆ ರಾಜ್ಯಪಾಲರಿಗೆ ಗೃಹ ಸಚಿವರಿಗೆ ಒತ್ತಾಯ ಮಾಡಿದ್ದವು