ಬೆಂಗಳೂರು, ಮೇ 23- ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.ಸಮಿತಿಯ ಕಾರ್ಯ ವೈಖರಿ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಡಗೀತೆಯನ್ನು ಅವಹೇಳನ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಆತನನ್ನು ಕಿತ್ತುಹಾಕಬೇಕು ಎಂದಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೋಹಿತ್ ಚಕ್ರತೀರ್ಥ ಅವರು ನಾಡಗೀತೆಯನ್ನು ತಿರುಚಿ ಬರೆದಿದ್ದಾರೆ ಎನ್ನಲಾದ ಟ್ವೀಟರ್ ಫೋಸ್ಟ್ ಅನ್ನು ತಮ್ಮ ಟ್ವೀಟ್ ಗೆ ಲಗತ್ತಿಸಿದ್ದಾರೆ.