ಗ್ವಾಲಿಯರ್.
ಮಧ್ಯ ಪ್ರದೇಶ ಲೋಕೋಪಯೋಗಿ ಇಲಾಖೆ ಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬನನ್ನು ಹಿಡಿದುಕೊಂಡ ಮಹಿಳೆ ಮಾನ ಬಂದಂತೆ ಚಪ್ಪಲಿಯಲ್ಲಿ ಥಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆ ಅಧಿಕಾರಿಯನ್ನು ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ.
ಮಹಿಳೆಯಿಂದ ಚಪ್ಪಲಿಯಲ್ಲಿ ಏಟು ತಿನ್ನುತ್ತಿರುವ ವ್ಯಕ್ತಿಯನ್ನು ಮಧ್ಯಪ್ರದೇಶದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್
ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದೆ
ಕೆಲಸ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿದ ಈ ಎಂಜಿನಿಯರ್ ಆನಂತರ ಆಕೆಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ .
ಕೆಲಸ ಕೊಡಿಸುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿ, ತಮ್ಮ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ
ಈ ಘಟನೆಯ ನಂತರ, ಕೋಪಗೊಂಡ ಸ್ಥಳೀಯ ಜನರು ಮತ್ತು ಮಹಿಳೆಯ ಕುಟುಂಬ ಸದಸ್ಯರು ಇಂಜಿನಿಯರ್ ಅನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ.
ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿ ಗ್ವಾಲಿಯರ್ ಸಮೀಪದ ದಾತಿಯಾ ನಿವಾಸಿ ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದ್ದು. ಇವರು ದಾಬಾದಲ್ಲಿ ಸಬ್ ಇಂಜಿನಿಯರ್ ಆಗಿ ನೇಮಕಗೊಂಡಿದ್ದಾರೆ. ಉದ್ಯೋಗದ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.