Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.
    Trending

    ವಕ್ಫ್ ಆಸ್ತಿ ತೆರವು ವಿರುದ್ಧ ಬಿಜೆಪಿ ಸಮರ.

    vartha chakraBy vartha chakraNovember 4, 20241 Comment3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.4:
    ವಕ್ಫ್ ಆಸ್ತಿ ಕಬಳಿಕೆ ತೆರವು ಕಾರ್ಯಾಚರಣೆ ಹೆಸರಿನಲ್ಲಿ ರಾಜ್ಯದ ರೈತರ ಭೂಮಿಯನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
    ಪಕ್ಷದ ರಾಜ್ಯ ಘಟಕದ ಕರೆಯ ಮೇರೆಗೆ ಎಲ್ಲ ತಾಲೂಕು ಕೇಂದ್ರ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ತಕ್ಷಣವೇ ವಕ್ಫ್ ಆಸ್ತಿ ತೆರವು ಕಾರ್ಯಾಚರಣೆ ನಿಲ್ಲಿಸಬೇಕು ಎಲ್ಲಾ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಗೊಳಿಸಬೇಕು ಎಂದು ಆಗ್ರಹಿಸಿದರು.
    ಲ್ಯಾಂಡ್ ಜಿಹಾದ್ :
    ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ಮೂಲಕ ಮತಾಂತರ ಮಾಡಿದಂತೆ ಈಗ ಸಚಿವ ಜಮೀರ್ ಅಹಮದ್ ಖಾನ್ ಅವರು ವಕ್್ಫ ಮೂಲಕ ಹಿಂದೂಗಳ ಭೂಮಿ ಕಬಳಿಸಲು ಕಾಂಗ್ರೆಸ್ ಲ್ಯಾಂಡ್ ಜಿಹಾದ್ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
    ರಾಜ್ಯ ಸರ್ಕಾರ ಅನ್ನದಾತರ ತಲೆ ಮೇಲೆ ಚಪ್ಪಡಿಕಲ್ಲು ಎಳೆದಿದೆ. ಜಮೀರ್ ರೈತರ ಜಮೀನು ಕಬಳಿಕೆಗೆ ಮುಂದಾಗಿದ್ದಾರೆ. ರೈತರ ಜಮೀನು ಕಬಳಿಸಲು ಹುನ್ನಾರ ನಡೆದಿದೆ. 1974ರಲ್ಲಿ ಆವತ್ತಿನ ಕಾಂಗ್ರೆಸ್ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ, ಇದು ರದ್ದಾಗಬೇಕು ಎಂದು ಆಗ್ರಹಿಸಿದರು.
    ಈ ನೋಟಿಫಿಕೇಷನ್ ಮುಸಲಾನರ ಓಲೈಕೆಗಾಗಿ ಮಾಡಲಾಗಿದೆ. ಸಿದ್ದರಾಮಯ್ಯ ಎಲ್ಲ ಪ್ರಕ್ರಿಯೆ ಸ್ಥಗಿತ ಮಾಡಿದ್ದೀವಿ ಅಂದಿದ್ದಾರೆ. ಸಿದ್ದರಾಮಯ್ಯ ಈಗ ಟೋಪಿ ತೆಗೆದಿದ್ದಾರೆ, ಮುಂದೆ ಮತ್ತೆ ಮಸೀದಿಗೆ ಹೋಗಿ ಟೋಪಿ ಹಾಕಿದರೆ ನಂಬುವುದು ಹೇಗೆ? ಇದು ವಕ್್ಫ ಬೋರ್ಡ್ ಆಗಿ ಉಳಿದಿಲ್ಲ, ಸಾಬರ ಬೋರ್ಡ್ ಆಗಿದೆ. ಮೊಹಮದ್ ಘೋರಿ, ಆದಿಲ್ ಷಾಹಿ ಬೋರ್ಡ್ ಆಗಿದೆ ಎಂದು ಕಿಡಿಕಾರಿದರು.
    ಎಲ್ಲೆಲ್ಲೂ ರೈತರ ಜಮೀನಿಗೆ ನೊಟೀಸ್ ಕೊಟ್ಟಿದ್ದಾರೆ. ರೈತರ ಭೂಮಿ, ಶಾಲೆ, ದೇವಸ್ಥಾನ, ಮಠಗಳನ್ನು ವಕ್್ಫ ಜಾಗ ಎಂದು ಮಾಡಿದ್ದಾರೆ. ಇದು ತುಘಲಕ್ ಸರ್ಕಾರ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಲೇವಡಿ ಮಾಡಿದರು. ಈ ಭಯೋತ್ಪಾದಕ, ಮತಾಂಧ ಮುಸ್ಲಿಮರು ರಾಜ್ಯದಲ್ಲಿ ಮಗುವಿನಂತೆ ಮಲಗಬಹುದು, ಯಾಕಂದ್ರೆ ಈ ಸರ್ಕಾರ ಅವರ ಪರ ಇದೆ. ಸ್ಲೀಪ್ ಲೈಕ್ ಎ ಬೇಬಿ ಬನ್ನಿ ಅಂತ ಪಾಕಿಸ್ತಾನದವರಿಗೆ ಸಿದ್ದರಾಮಯ್ಯ ಕರೀತಿದ್ದಾರೆ ಎಂದು ಕುಟಕಿದರು.
    ದೇಶದ್ರೋಹಿ:
    ಬಳ್ಳಾರಿಯಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ,
    ನಿಜಾಮರ ಕಾಲದಲ್ಲಿ ರಜಾಕಿಗಳು ಜನರನ್ನು ಲೂಟಿ ಮಾಡುತ್ತಿದ್ದರು. ಅದೇ ರೀತಿ ರೈತರ 15 ಸಾವಿರ ಎಕರೆಯಷ್ಟು ಜಮೀನನ್ನು ಕಸಿಯುವ ಪ್ರಯತ್ನ ಕಾಂಗ್ರೆಸ್‌ ಮಾಡುತ್ತಿದೆ ಎಂದು ದೂರಿದರು.
    ಸರ್ಕಾರದ ಈ ನಡೆ ವಿರುದ್ಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಇದು ಇಲ್ಲಿಗೆ ನಿಲ್ಲುವುದಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಕಾರಜೋಳ ಅವರ ಸತ್ಯಶೋಧನಾ ಸಮಿತಿ ವರದಿ ನಮ್ಮ ಕೈಸೇರಿದೆ. ನ್ಯಾಯವಾದಿಗಳ ತಂಡವನ್ನೂ ಪಕ್ಷ ರಚನೆ ಮಾಡಿದೆ. ಯಾವುದೇ ರೈತರಿಗೆ ಅನ್ಯಾಯವಾಗಿದ್ದಲ್ಲಿ ವಕೀಲರ ತಂಡವನ್ನು ಸಂಪರ್ಕಿಸಬಹುದು. ಒಂದು ಇಂಚು ಜಾಗ ವಕ್ಫ್‌ಗೆ ಹೋಗಲು ಬಿಜೆಪಿ ಬಿಡುವುದಿಲ್ಲ. ನಾವು ರೈತರ ಪರ ಇರಲಿದ್ದೇವೆ’ ಎಂದು ಹೇಳಿದರು
    ‘ಜಮೀರ್‌ ಎಂಬ ದೇಶದ್ರೋಹಿ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ಬೆದರಿಸಿ ರೈತರ ಜಮೀನುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ವಿರಕ್ತ ಮಠದ ಜಮೀನು ವಕ್ಫ್‌ಗೆ ಹೋಗುವಂತಾಗಿದೆ. ಕೊಪ್ಪಳದಲ್ಲಿ ದಲಿತರ ಜಮೀನು ಕಬಳಿಸಲಾಗುತ್ತಿದೆ. ಕಲಬುರಗಿಯ ಸವಳೇಶ್ವರ ಗ್ರಾಮದ ಬೀರೇಶ್ವರ ದೇಗುಲದ ಜಮೀನನ್ನು ವಕ್ಫ್‌ ಆಸ್ತಿ ಎಂದು ಗುರುತಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಮತ್ತು ಜಮೀರ್‌ ಕಾರಣ’ ಎಂದು ಆಪಾದಿಸಿದರು
    ‘ವಕ್ಫ್‌ ತಿದ್ದುಪಡಿ ಕಾಯಿದೆ ಸಂಸದೀಯ ಸಮಿತಿಯ ಮುಂದೆ ಇದೆ. ಪ್ರಧಾನಿ ನರೇಂದ್ರ ಮೋದಿ ಏನಾದರೂ ಈ ಕಾನೂನು ಜಾರಿಗೆ ತಂದರೆ, ರೈತರಿಂದ ಜಮೀನು ಪಡೆಯುವುದು ಕಷ್ಟ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
    ಇದಾದ ನಂತರ ಇಲ್ಲಿ ಯಾರೂ ರೌಡಿಗಳಿಲ್ಲ, ಪುಡಾರಿಗಳಿಲ್ಲ. ಎಲ್ಲರೂ ರೈತರೇ ಬನ್ನಿ’ ಎಂದು ಹೇಳಿ ತಾವಿದ್ದಲ್ಲಿಗೇ ಬಳ್ಳಾರಿ ಜಿಲ್ಲಾಧಿಕಾರಿಯನ್ನು ಕರೆಸಿಕೊಂಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಪತ್ರವನ್ನು ಅವರ ಕೈಗೆ ನೀಡಿದರು.
    ಸಂಘ, ಸಂಸ್ಥೆಗಳು ಪ್ರತಿಭಟನೆ ನಡೆಸಿದರೆ ಜಿಲ್ಲಾಧಿಕಾರಿಗಳ ಕಚೇರಿಗೇ ತೆರಳಿ ಮನವಿ ಪತ್ರ ಸಲ್ಲಿಸುವುದು ವಾಡಿಕೆ. ಆದರೆ, ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಬಂದಿದ್ದ ಕಾರಣಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ಪ್ರತಿಭಟನಾ ಸ್ಥಳಕ್ಕೇ ತೆರಳಿದ್ದರು. ಕಚೇರಿ ಆವರಣದ ಕಟ್ಟೆಯ ಮೇಲೆ ನಿಂತಿದ್ದ ವಿಜಯೇಂದ್ರ ಅವರನ್ನು ಕೆಳಗಿಳಿದು ಬರುವಂತೆ ಜಿಲ್ಲಾಧಿಕಾರಿ ಹೇಳಿದರು.
    ಜಿಲ್ಲಾಧಿಕಾರಿ ಮಾತಿಗೆ ಆಕ್ರೋಶಗೊಂಡ ವಿಜಯೇಂದ್ರ, ‘ಇಲ್ಯಾರೂ ರೌಡಿಗಳಿಲ್ಲ, ಪುಡಾರಿಗಳಿಲ್ಲ ಬನ್ನಿ’ ಎಂದು ಹೇಳಿದರು. ಮರುಮಾತಾಡದೇ ಕಟ್ಟೆಯ ಬಳಿಗೇ ತೆರಳಿದ ಜಿಲ್ಲಾಧಿಕಾರಿ ಮನವಿ ಪತ್ರ ಸ್ವೀಕರಿಸಿದರು.

    Verbattle
    Verbattle
    Verbattle
    Bangalore BJP Congress News Politics Trending Varthachakra ಕಾಂಗ್ರೆಸ್ ಕಾನೂನು ನರೇಂದ್ರ ಮೋದಿ ನ್ಯಾಯ ಬಿಜೆಪಿ Bengaluru ರಾಜಕೀಯ ಶಾಲೆ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿ: 150 ಜನರಿಗೆ ಕಹಿ.
    Next Article ಇನ್ಫೋಸಿಸ್ ನಾರಾಯಣಮೂರ್ತಿ ಹೆಸರಲ್ಲಿ ವಂಚನೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesweaft on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Jamesweaft on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Bbfvmoism on Crypto ವಂಚಕ Arrest.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.