ಬೆಂಗಳೂರು,ಜು.4:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಕಿರುವ ಬಟ್ಟೆಗಳು ಮಾತ್ರ ಶುದ್ದವಾಗಿರುತ್ತದೆ. ಆದರೆ ಅವರ ಆಡಳಿತ ಮಾತ್ರ ಅಶುದ್ಧ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ. ಇದೆಲ್ಲವೂ ಸಿದ್ದರಾಮಯ್ಯ ಅವರ ಮೂಗಿನಡಿಯೇ ನಡೆದಿದೆ ಎಂದು ಆರೋಪಿಸಿದರು
ಇದರಲ್ಲಿ ನನ್ನ ನನ್ನ ಪಾತ್ರವೇನಿಲ್ಲ. ನಾನೇಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಪ್ರಶ್ನಿಸುತ್ತಾರೆ. ಇದು ಹೇಗಿದೆ ಎಂದರೆ ಮಳ್ಳಿ ಮಳ್ಳಿ ಮಂಚಕ್ಕೆಷ್ಟು ಕಾಲು ಎಂದರೆ ಮೂರು ಮತ್ತೊಂದು ಎಂಬಂತೆ ಸಿದ್ದರಾಮಯ್ಯನವರ ಕಥೆಯೂ ಅದೇ ಆಗಿದೆ ಎಂದು ವ್ಯಂಗ್ಯವಾಡಿದರು.
ನಿಮ್ಮ ತವರು ಜಿಲ್ಲೆಯಲ್ಲೇ ಅಕ್ರಮ ನಡೆದಿರುವುದಕ್ಕೆ ನೀವೇ ಜವಾಬ್ದಾರಿಯಲ್ಲವೇ? ಇದರಲ್ಲಿ ಅಕ್ರಮ ಎಸಗಿರುವವರು ನಿಮ ಕುಟುಂಬದವರು ಮತ್ತು ಹಿಂಬಾಲಕರು. ನಿಮ ಹಿಂಬಾಲಕರೇ ಇದರಲ್ಲಿ ನೇರ ಫಲಾನುಭವಿಗಳು. ಯಾರನ್ನು ರಕ್ಷಣೆ ಮಾಡಲು ಹೊರಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ಸಿಬಿಐ ತನಿಖೆ:
ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿ
ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಆಗ್ರಹಿಸಿದರು.
ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು
ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು
ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.
Previous Articleನಾಲ್ಕು ಅಡಿ ಜಾಗಕ್ಕೆ ಬಿತ್ತು ಹೆಣ.
Next Article ನ್ಯಾಯಮೂರ್ತಿ ಭಕ್ತವತ್ಸಲ ವರದಿ ತಿರಸ್ಕಾರ.