Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಅಂದಿದ್ದಕ್ಕೆ ಜಾರ್ಜ್ ಏನಂದ್ರು ನೋಡಿ ?
    Viral

    ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಅಂದಿದ್ದಕ್ಕೆ ಜಾರ್ಜ್ ಏನಂದ್ರು ನೋಡಿ ?

    vartha chakraBy vartha chakraJune 4, 20251 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.4:
    ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅತ್ಯಂತ ಸುಭದ್ರವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲವಿದೆ ಅವರು ಮುಖ್ಯಮಂತ್ರಿ ಆಗಿ ಐದು ವರ್ಷ ಇರಬಹುದು ಅಥವಾ ಹತ್ತು ವರ್ಷ ಕೂಡ ಇರಬಹುದು ಎಂದು ಇಂಧನ ಮಂತ್ರಿ ಕೆ.ಜೆ. ಚಾರ್ಜ್ ಹೇಳಿದ್ದಾರೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಗೆ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎನ್ನುವುದು ಎಲ್ಲಾ ಊಹಾಪೋಹ ನೀವುಗಳೇ ದಿನಾಂಕ ನಿಗದಿ ಪಡಿಸಿಕೊಂಡು ಪ್ರಶ್ನೆ ಕೇಳುತ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ನಾವು ಈಗ ಜೂನ್‌ನಲ್ಲಿದ್ದೇವೆ, ನವೆಂಬರ್ ಬರಲಿ ಆಗ ಮಾತನಾಡುತ್ತೇನೆ. ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ಸಿದ್ದರಾಮಯ್ಯ ಹಾಗೂ ನಮ್ಮ ಸರ್ಕಾರದ ಮೇಲಿದೆ. ಯಾವ ವಿಚಾರ ಯಾವಾಗ ನಿರ್ಧರಿಸಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ’ ಎಂದರು.
    ಐದು ವರ್ಷವೂ ಕಾಂಗ್ರೆಸ್ ಸರ್ಕಾರ ಇರುತ್ತದೆ. ಈ ವಿಚಾರದ ಬಗ್ಗೆ ಹೆಚ್ಚು ಪ್ರಶ್ನೆ ಕೇಳಿ ನನ್ನನ್ನು ಸಿಲುಕಿಸಲು ಯತ್ನಿಸಬೇಡಿ. ನೀವು ಪ್ರಶ್ನೆ ಕೇಳಿದ್ದೀರಾ ನಾನು ಉತ್ತರಿಸಿದ್ದೇನೆ. ನನ್ನದೇ ಪ್ರಶ್ನೆ-ನನ್ನದೇ ಉತ್ತರ ಎಂಬಂತೆ ಬಿಂಬಿಸಬೇಡಿ’ ಎಂದು ಹೇಳಿದರು.
    ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತಾಗಿ ಬಿಜೆಪಿ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕೂ ಇಲ್ಲ. ಅವರೇನು ಅದರ ಬಗ್ಗೆ ಮಾತನಾಡುವುದು? ಅವರು ಎಲ್ಲಾ ವಿಚಾರಗಳಲ್ಲೂ ಇಂಥಾದ್ದೇ ಆರೋಪಗಳನ್ನು ಮಾಡುತ್ತಾರೆ. ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ವಿಚಾರದಲ್ಲಿ ಇದೇ ರೀತಿ ದೂರಿದರು. ಈಗ ಆ ಸೇತುವೆ ನಿರ್ಮಾಣವಾಗದೇ ಜನರು ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು
    ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಹೋಗಿದ್ದು ಒಳ್ಳೆಯದೇ ಆಯಿತು.ಈ ಬಗ್ಗೆ ನಾವು ನ್ಯಾಯಾಲಯದಲ್ಲಿ ಉತ್ತರಿಸುತ್ತೇನೆ. ಇನ್ನೂ ಯಾರ‍್ಯಾರು ಎಲ್ಲೆಲ್ಲಿಗೆ ದೂರು ಕೊಡುತ್ತಾರೆಯೋ ಕೊಡಲಿ. ಎಲ್ಲವನ್ನೂ ಎದುರಿಸುವ ಶಕ್ತಿ ನನಗಿದೆ. ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಯಾವ ಕಿಕ್ ಬ್ಯಾಕ್ ಕೂಡ ನಡೆದಿಲ್ಲ. ಎಲ್ಲರಿಗೂ ವಿವರಣೆ ಕೊಟ್ಟಿದ್ದೇನೆ’ ಎಂದು ಸ್ಪಷ್ಟಪಡಿಸಿದರು
    ಐಎಎಸ್ ಅಧಿಕಾರಿ ಡಿ.ಕೆ. ರವಿ ಪ್ರಕರಣದಲ್ಲೂ ನನ್ನ ಮೇಲೆ ಆರೋಪ ಮಾಡಿದ್ದರು. ಆಮೇಲೆ ಸಿಬಿಐ ವರದಿ ಏನೆಂದು ಬಂದಿತು? ನನ್ನ ಪಾತ್ರವೇ ಇಲ್ಲ ಎಂದು ಬಂತು. ಈಗ ಬಂದಿರುವ ಆರೋಪ‌ವೂ ಅಂಥಾದ್ದೇ. ಬಿಜೆಪಿಯವರು ನನ್ನ ಮೇಲೆಯೇ ಈ ರೀತಿ ಏಕೆ ಆರೋಪ ಮಾಡುತ್ತಾರೆಯೋ ಗೊತ್ತಿಲ್ಲ’ ಎಂದರು.
    ‘ನಾನು ಸಾಫ್ಟ್ ನಾಯಕನೇನಲ್ಲ. ಸೌಮ್ಯವಾಗಿ ಮಾತನಾಡುತ್ತೇನಷ್ಟೆ. ನಾನು ಯುವ ಕಾಂಗ್ರೆಸ್‌ ಅಧ್ಯಕ್ಷನಾಗಿದ್ದೆ. ಹಲವು ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದೇನೆ. ನಾನು ಸಾಫ್ಟ್‌ ಆಗಿದ್ದರೆ ಇವೆಲ್ಲಾ ಆಗುತ್ತಿತ್ತಾ?’ ಎಂದು ಕೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ ಬಿಜೆಪಿ Bengaluru ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ.?
    Next Article ಸಂಭ್ರಮಾಚರಣೆ ಅಲ್ಲ ಶೋಕಾಚರಣೆ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • LeonardReawn on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Glennhof on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.