ಬೆಂಗಳೂರು,ಆ.19- ಸುದ್ದಿಯಲ್ಲದ ಕಾರಣಕ್ಕೆ ಇದೀಗ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸುದ್ದಿಯಾಗಿದ್ದಾರೆ. ನಾವು ನಳಪಾಡ್ ಅವರ ಹುಡುಗರು ಎಂದು ಅಶರ ಹೆಸರು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ಹಲ್ಲೆಗೊಳಗಾದ ವಿದ್ಯಾರ್ಥಿ ದೂರು ನೀಡಿದ್ದು, ನಾಪತ್ತೆಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್ ಜೈನ್ ಎಂಬ ವಿದ್ಯಾರ್ಥಿ ಈ ವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದು ಇದಕ್ಕಾಗಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬುವವರಿಂದ ಸಾಲ ಪಡೆದುಕೊಂಡಿದ್ದರು ಇದರಲ್ಲಿ ಮೂರು ಲಕ್ಷ ರೂಗಳನ್ನು ಕಾರಣಾಂತರಗಳಿಂದಾಗಿ ಜೀವನ್ಗೆ ಹೇಳಿದ ಸಮಯಕ್ಕೆ ನೀಡಲಾಗದೇ ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾಲ ಪಡೆಯುವ ನೆಪದಲ್ಲಿ ಇವರು ಜೀವನ್ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಅಷ್ಟೇ ಅಲ್ಲದೆ ಆತನನ್ನು ಬೆತ್ತಲೆಗೊಳಿಸಿ ಅದರ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಜೀವನ್ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನನ್ನು ಪದೆ ಪದೇ ಹೋಟೆಲ್ಗೆ ಕರೆಸಿಕೊಂಡು ಹಲ್ಲೆ ಮಾಡಿ ಆರು ಲಕ್ಷ ಹಾಕಿಸಿಕೊಂಡ ಜೊತೆಗೆ 10 ಲಕ್ಷದವರೆಗೆ ಕೊಡಬೇಕು ಎಂದು ಕಿರುಕುಳ ನೀಡಿದ್ದಾರೆ. ದೂರಿನಲ್ಲಿ ಒಂಬತ್ತು ಮಂದಿ ವಿರುದ್ಧ ಅಪಹರಣ ಹಾಗೂ ಸುಲಿಗೆ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ದೂರು ಆಧರಿಸಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Previous Articleಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
Next Article ನಾನೇನೂ ತಪ್ಪು ಮಾಡಿಲ್ಲ