ತಮ್ಮ ಒಪ್ಪಿಗೆಯಿಲ್ಲದೆ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದ್ದು, ಸಮಾಧಿ ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್.ಗೋಪಾಲಗೌಡ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಮೃತದೇಹಗಳನ್ನು ಎಲ್ಲೆಂದರಲ್ಲಿ ಸಮಾಧಿ ಮಾಡುವುದು ಅತ್ಯಂತ ಸೂಕ್ಷ್ಮ ವಿಷಯ. ಈ ಪ್ರಕರಣ ಒಂದು ಶವ ಸಮಾಧಿ ಮಾಡುವುದು ಮಾತ್ರವಲ್ಲ, ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡಿದಲ್ಲಿ ಗಂಭೀರ ಪರಿಣಾಮ ಎದುರಾಗುತ್ತದೆ. ಎಲ್ಲೆಂದರಲ್ಲಿ ಸಮಾಧಿ ಮಾಡುವುದಕ್ಕೆ ಅವಕಾಶ ಸಿಕ್ಕಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುತ್ತದೆ ಎಂದು ತಿಳಿಸಿದೆ.
ನಿಗದಿತ ಸ್ಥಳ (ರುದ್ರಭೂಮಿ)ದಲ್ಲಿ ಹೊರತುಪಡಿಸಿ ಬೇರೆ ಸ್ಥಳದಲ್ಲಿ ಶವ ಹೂಳಲು ಅವಕಾಶವಿಲ್ಲ. ಇದಕ್ಕೆ ಅವಕಾಶ ನೀಡಿದಲ್ಲಿ ಮುಂದೊಂದಿನ ಕೊಲೆ ಪ್ರಕರಣಗಳಲ್ಲಿಯೂ ಮುಂದುವರೆಯುವ ಸಾಧ್ಯತೆ ಇರುತ್ತದೆ. ಇದರಿಂದ ಎದುರಾಗುವ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಬೇಕು. ಇಂತಹ ಕೃತ್ಯಗಳಿಗೆ ಅನುಮತಿ ನೀಡಿದಲ್ಲಿ ಬೇರೊಬ್ಬ ವ್ಯಕ್ತಿ ಮತ್ತೊಬ್ಬರ ಆಸ್ತಿಯಲ್ಲಿ ಶವ ಹೂಳುವುದಕ್ಕೆ ಕಾರಣವಾಗಬಹುದು. ಆದ್ದರಿಂದ ಗೊತ್ತುಪಡಿಸಿದ ಸ್ಮಶಾನದಲ್ಲಿ ಮಾತ್ರ ದಹನ ಮಾಡಬೇಕು. ಅದನ್ನು ಹೊರತುಪಡಿಸಿ ಇತರೆಡೆ ಅಂತ್ಯಕ್ರಿಯೆ ಮಾಡುವುದಕ್ಕೆ ಅವಕಾಶವಿಲ್ಲ ಎಂದಿತು.
Previous ArticleIAS ಅಧಿಕಾರಿ ಅಪಘಾತದಲ್ಲಿ ದುರ್ಮರಣ.
Next Article ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

