ಬೆಂಗಳೂರು,ಮಾ.7-
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೆ ಬಜೆಟ್‌ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ ಹಣವನ್ನು 2025-26ರ ಸಾಲಿನ ವರ್ಷಕ್ಕೆ ಮೀಸಲಿರಿಸಿ ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಕ್ಯಾಂಟೀನ್ಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ. ರಾಜ್ಯವ್ಯಾಪಿ ಅಕ್ಕ ಕೋ ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವ ಯೋಜನೆಯನ್ನು ಘೋಷಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಲಾಗಿದೆ.
ವಿಮಾನ ನಿಲ್ದಾಣ:
ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು.
219 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ರಾಯಚೂರು ವಿಮಾನ ನಿಲ್ದಾಣದ ಕಾಮಗಾರಿಗಳಿಗೆ ಇಲ್ಲಿಯವರೆಗೆ 53 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಯ ಭೂಸ್ವಾಧೀನಕ್ಕಾಗಿ 319 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಕಾರವಾರ ನೌಕಾನೆಲೆಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಅಗತ್ಯ ಅನುದಾನ ಒದಗಿಸಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ 50:50 ರ ಅನುಪಾತದಲ್ಲಿ ಒಂಭತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಏಳು ಯೋಜನೆಗಳ ಭೂಸ್ವಾಧೀನದ ಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ. ಒಟ್ಟಾರೆ 16,235 ಕೋಟಿ ರೂ. ವೆಚ್ಚದ ಈ ಯೋಜನೆಗಳಿಗೆ ರಾಜ್ಯ ಸರ್ಕಾರದ ವತಿಯಿಂದ 9,847 ಕೋಟಿ ರೂ.ಗಳನ್ನು ವೆಚ್ಚಗೊಳಿಸಲಾಗುವುದು. 2025-26ನೇ ಆಯವ್ಯಯದಲ್ಲಿ 600 ಕೋಟಿ ರೂ. ಒದಗಿಸಲಾಗಿದೆ. ವಾಹನ ದಟ್ಟಣೆ ಇರುವ ರೈಲ್ವೇ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ಬದಲಿಗೆ ರಸ್ತೆ ಮೇಲ್ಸೇತುವೆ/ಕೆಳಸೇತುವೆ ನಿರ್ಮಿಸಲು ಈಗಾಗಲೇ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು 50 ಕೋಟಿ ರೂ. ಒದಗಿಸಲಾಗಿದೆ.
Previous Articleಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
Next Article ಚಿನ್ನ ಕಳ್ಳಸಾಗಣೆ ಮಾಡಿದ ಅಂಧ