ಬೆಂಗಳೂರು:ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ಪ್ರಮುಖ ಸಾಕ್ಷಿ ಕಳ್ಳತನವಾಗಿದ್ದು, ಈ ಸಂಬಂಧ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭೋವಿ ನಿಗಮದ ಕೋಟ್ಯಂತರ ಅವ್ಯವಹಾರ ಪ್ರಕರಣದ ತನಿಖೆಯುನ್ನು ಸಿಐಡಿ ನಡೆಸುತ್ತಿರುವ ನಡುವೆಯೇ , ಅವ್ಯವಹಾರಕ್ಕೆ ಸಂಬಂಧಿಸಿದ್ದ ಸಾಕ್ಷ್ಯಗಳು ಇದ್ದ ಮೊಬೈಲ್ ಕಳ್ಳತನವಾಗಿದೆ.
ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕ ಸಿಪಿ ಶಿವಸ್ವಾಮಿ ಕಳೆದ ಡಿ 27 ರಂದು ಸಂಜೆ 5.30ರ ವೇಳೆ ಚನ್ನರಾಯಪಟ್ಟಣಕ್ಕೆ ತೆರಳಲು ನೆಲಮಂಗಲದ ಕುಣಿಗಲ್ ಸರ್ಕಲ್ನಲ್ಲಿ ಬಸ್ಸಿಗೆ ಕಾಯುತ್ತಿದ್ದರು. ಈ ವೇಳೆ ಶಿವಸ್ವಾಮಿ ಜೇಬಿನಲ್ಲಿದ್ದ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಅಲ್ಟ್ರಾ 5ಜಿ ಮೊಬೈಲ್ ಅನ್ನು ಕದ್ದಿದ್ದಾರೆ. ಕಳ್ಳರು ಮೊಬೈಲ್ ಕಳುವು ಮಾಡಿ, ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ಸಿಪಿ ಶಿವಸ್ವಾಮಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಲೋಕಾಯುಕ್ತ ಮತ್ತು ಸಿಐಡಿ ತನಿಖೆ ನಡೆಸುತ್ತಿವೆ. ತನಿಖೆಗೆ ಹಾಗೂ ನಿಗಮಕ್ಕೆ ಸಂಬಂಧಿಸಿದ ಪ್ರಮುಖ ದಾಖಲಾತಿಗಳು ಮೊಬೈಲ್ನಲ್ಲಿ ಇವೆ. ಈ ದಾಖಲಾತಿಗಳನ್ನು ಉದ್ದೇಶಪೂರ್ವಕವಾಗಿ ಕಳ್ಳತನ ಮಾಡಿರುವ ಅನುಮಾನವಿದೆ ಎಂದು ದೂರು ನೀಡಿದ್ದಾರೆ. ಮೊಬೈಲ್ ಕದ್ದವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ಏನಿದು ಹಗರಣ?
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿತ್ತು.
ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು.
90 ಕೋಟಿ ಅವ್ಯವಹಾರ;
ಪ್ರಕರಣ ತನಿಖೆಯನ್ನು ಸಿಐಡಿ ಮತ್ತು ಲೋಕಾಯುಕ್ತ ನಡೆಸುತ್ತಿವೆ. 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಸಿಐಡಿ ತನಿಖೆಯಲ್ಲಿ ಬಯಲಾಗಿತ್ತು.
Previous Articleಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
Next Article ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ

8 Comments
best online drugstore
rx prices
drug stores canada
approved canadian online pharmacies
canada pharmacy online no script
online prescriptions without a doctor
my canadian pharmacy
buy drugs canada