ಬೆಂಗಳೂರು,ನ.26-
ಉಪElectionಯ ಗೆಲುವಿನ ಆತ್ಮವಿಶ್ವಾಸದಿಂದ ಬೇಕು ತರುವ ಕಾಂಗ್ರೆಸ್ಸಿನಲ್ಲಿ ಇದೀಗ ಅಧಿಕಾರ ತ್ಯಾಗದ ಕುರಿತು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಧಿಯನ್ನು ಎರಡೂವರೆ ವರ್ಷ ಮಾಡಲಾಗಿದೆ. ಅದೇ ರೀತಿ ಕೆಲವು ಸಚಿವರಿಗೂ ಸಂದೇಶ ನೀಡಿದ್ದೇವೆ. ಸದ್ಯಕ್ಕೆ ಈ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಹೇಳಿದರು.
ಗ್ರಾಮಪಂಚಾಯಿತಿ ಅಧ್ಯಕ್ಷರನ್ನು ಒಂದು ವರ್ಷದ ಬಳಿಕ ರಾಜೀನಾಮೆ ಕೊಡಿಸಬೇಕಾದರೆ ಸಾಕಷ್ಟು ಸರ್ಕಸ್ ಮಾಡಬೇಕು. ಈಗ ಅವರ ಅಧಿಕಾರವಧಿ ಎರಡೂವರೆ ವರ್ಷ ಆಗಿದೆ. ಸಂಪುಟದ ಸಚಿವರಿಗೂ ಈ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರ ಹುದ್ದೆಯನ್ನೇ ಬಿಟ್ಟುಕೊಡದ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನು ಸೋನಿಯಾಗಾಂಧಿ ತ್ಯಾಗ ಮಾಡಿದರು. ಮಹಾತಗಾಂಧೀಜಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.
ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದು ಅದನ್ನು ಯಾರಿಗೆ ತಿಳಿಸಬೇಕು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.
ಸಚಿವ ಸಂಪುಟ ಪುನರ್ ರಚನೆ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ” ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು” ಎಂದು ತಿಳಿಸಿದರು.
Previous Articleಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.
Next Article IPL 2025: ಐಪಿಎಲ್ ಅಖಾಡದಲ್ಲಿ 13 ಕನ್ನಡಿಗರು