ಬೆಂಗಳೂರು.
ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ತಮ್ಮ ಹುಟ್ಟು ಹಬ್ಬವನ್ನು ಸಂಪೂರ್ಣ ವೈಯಕ್ತಿಕವಾಗಿ ಆಚರಣೆ ಮಾಡಿಕೊಂಡಿದ್ದ ನಟ ದರ್ಶನ್ ಇದಕ್ಕಾಗಿ ಅಭಿಮಾನಿಗಳ ಕ್ಷಮೆ ಕೋರಿದ್ದರು. ಇದೀಗ ತಾವು ಬೇಡ ಎಂದರೂ ಕೂಡ ರಾಜ್ಯದ ಹಲವು ಭಾಗಗಳಲ್ಲಿ ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
ಪ್ರೀತಿಯ ಸೆಲೆಬ್ರಿಟಿಸ್‌ಗಳೇ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ
ನಿಮ್ಮ ದಾಸ ದರ್ಶನ್”
ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Previous Articleಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ
Next Article ಮುಡಾ ಹಗರಣ ತನಿಖೆಗೆ ಯೋಗ್ಯವಲ್ಲ