Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.
    ಮತ್ತಷ್ಟು

    ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.

    vartha chakraBy vartha chakraOctober 3, 2024Updated:October 3, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.3:
    ವನ್ಯಜೀವಿಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಅರಣ್ಯ ಪ್ರದೇಶ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಕಾಡಿನಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯ ಮತ್ತು ಇಂದಿನ ಅಗತ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
    ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ಜಾಗೃತಿ ನಡಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ವನ್ಯಜೀವಿಗಳ ಪಾತ್ರ ಮಹತ್ವದ್ದಾಗಿದೆ. ಕಾಡಿನಲ್ಲಿ ಬೆಳೆಯುವ ಹುಲ್ಲು, ಸೊಪ್ಪನ್ನು ಜಿಂಕೆ, ಕಡವೆ, ಮೊದಲಾದ ಸಸ್ಯಹಾರಿ ಪ್ರಾಣಿಗಳು ತಿನ್ನುತ್ತವೆ, ಈ ಪ್ರಾಣಿಗಳನ್ನು ಚಿರತೆ, ಹುಲಿ, ಕತ್ತೆ ಕಿರುಬ ಮೊದಲಾದ ಪ್ರಾಣಿಗಳು ಬೇಟೆಯಾಡುತ್ತವೆ. ಹೀಗೆ ಪ್ರಕೃತಿ ಸಮತೋಲನ ಕಾಪಾಡುತ್ತವೆ ಎಂದು ಹೇಳಿದರು
    ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ನಮ್ಮಂತೆಯೇ ಬದುಕುವ ಹಕ್ಕಿದೆ. ಅದು ವನ್ಯಜೀವಿಯಾಗಿರಲಿ, ಕೀಟ, ಪಕ್ಷಿಯೇ ಆಗಿರಲಿ ಅಥವಾ ಸಸ್ಯ ಸಂಕುಲವೇ ಆಗಿರಲಿ ಎಲ್ಲ ಜೀವಿ, ಸಸ್ಯಗಳಿಗೂ ಬದುಕುವ ಹಕ್ಕಿದೆ. ಆದರೆ ಇಂದು ಹಲವು ವನ್ಯ ಜೀವಿಗಳು ಅಳಿವಿನ ಅಂಚಿನಲ್ಲಿವೆ. ಕೆಲವು ನಶಿಸಿಹೋಗಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಗುತ್ತದೆ ಎಂದರು.
    ನಮ್ಮ ದೇಶವನ್ನಾಳಿದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧೀ ಅವರಿಗೆ ದೂರದರ್ಶಿತ್ವ ಇತ್ತು. ಹೀಗಾಗಿಯೇ ಅವರು ವನ್ಯಜೀವಿ ಸಂರಕ್ಷಣಾ ಕಾಯಿದೆ 1972, ಅರಣ್ಯ ಸಂರಕ್ಷಣಾ ಕಾಯಿದೆ 1980ನ್ನು ಜಾರಿಗೆ ತಂದರು. ಇದರ ಫಲವಾಗಿ ಇಂದಿಗೂ ಅರಣ್ಯ, ವನ್ಯ ಜೀವಿಗಳು ಉಳಿದಿವೆ. ಈ ಎರಡು ಕಾಯಿದೆ ಇಲ್ಲದೆ ಇದ್ದಿದ್ದರೆ ಇಂದು ವನ್ಯ ಮೃಗಗಳನ್ನು ಮತ್ತು ಕಾಡುಗಳನ್ನು ನಾವು ಫೋಟೋದಲ್ಲಿ ನೋಡಬೇಕಾದ ಸ್ಥಿತಿ ಬರುತ್ತಿತ್ತು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು ಎಂದು ತಿಳಿಸಿದರು
    ಪಶ್ಚಿಮ ಘಟ್ಟ ಹಲವಾರು ಪ್ರಾಣಿ ಪ್ರಭೇದಗಳಿಗೆ ಸುರಕ್ಷಿತ ಆವಾಸ ಸ್ಥಾನವಾಗಿದೆ. ಭಾರತವು ಪ್ರಪಂಚದ ಪ್ರತಿಶತ 7 ಜೀವವೈವಿಧ್ಯತೆಯ ತಾಣಗಳಲ್ಲಿ ಒಂದಾಗಿದೆ. ಇದನ್ನು ಕಾಪಾಡಲು ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
    ಭೂಭಾಗದ ಶೇ.33ರಷ್ಟು ಅರಣ್ಯ ಇರಬೇಕು ಆದರೆ, ರಾಜ್ಯದಲ್ಲಿ 22ರಷ್ಟು ಮಾತ್ರ ಹಸಿರು ಹೊದಿಕೆ ಇದೆ. ಜೊತೆಗೆ ನಾನು ಸಚಿವನಾದ ತರುವಾಯ ಹಲವಾರು ವರ್ಷಗಳಿಂದ ಒತ್ತುವರಿ ಮಾಡಲಾಗಿದ್ದ ಸಾವಿರಾರು ಎಕರೆ ಅರಣ್ಯ ಭೂಮಿಯನ್ನು ತೆರವು ಮಾಡಿಸಿದ್ದೇನೆ. ಹೊಸದಾಗಿ 10 ಸಾವಿರ ಎಕರೆ ಭೂಮಿಯನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು
    ಅರಣ್ಯ ವ್ಯಾಪ್ತಿ ಕ್ಷೀಣಿಸಿದರೆ, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇದಕ್ಕೆ ಅರಣ್ಯ ಪ್ರದೇಶ ಒತ್ತುವರಿಯಾಗದಂತೆ ತಡೆಯುವುದೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. 2015ರ ನಂತರದ ಅರಣ್ಯ ಒತ್ತುವರಿ ತೆರವು ಮಾಡುಸುತ್ತಿದೆ. ಈ ಪೈಕಿ ಪಟ್ಟಾ ಭೂಮಿಯೂ ಸೇರಿ 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿರುವವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಒಕ್ಕಲೆಬ್ಬಿಸಬೇಡಿ ಎಂದು ಸೂಚಿಸಿದ್ದೇವೆ. ಆದರೆ ಇದಕ್ಕೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಪ್ರಚಾರ ಮಾಡಿ ಉದ್ದೇಶ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸುತ್ತೇವೆ. ಹೊಸ ಒತ್ತುವರಿದಾರರ ಮೇಲೆ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು
    ಸಮಾರಂಭದಲ್ಲಿ ಉಪಸ್ಥಿತರಿದ್ದ ಚಿತ್ರನಟ ರಿಷಬ್ ಶೆಟ್ಟಿ ಮಾತನಾಡಿ, ತಮ್ಮ ಚಿತ್ರದಲ್ಲಿ ಕೂಡ ಸಹಬಾಳ್ವೆಯ ಸಂದೇಶ ಸಾರಲಾಗಿದ್ದು, ಅರಣ್ಯ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ನಾವು ಅರಣ್ಯವನ್ನು ಮತ್ತು ಅರಣ್ಯದಲ್ಲಿನ ಸಂಪತ್ತನ್ನು, ವನ್ಯಜೀವಿಗಳನ್ನು ಸಂರಕ್ಷಿಸಬೇಕು ಎಂದು ಮನವಿ ಮಾಡಿದರು.

    Verbattle
    Verbattle
    Verbattle
    ಕಲೆ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleED ವಿರುದ್ಧ ಕಾನೂನು ಹೋರಾಟ.
    Next Article ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026

    2 Comments

    1. kazinoukrainy on December 16, 2025 6:55 pm

      Давно искал топовые казино онлайн и наткнулся на адекватный рейтинг с лицензиями Украины. Если смотреть рейтинг лучших казино онлайн, разница сразу видна. Можно просто открыть http://topovye-kazino-onlajn.biz.ua/ и посмотреть список казино. Онлайн казино рейтинг лучших обновляется почти каждый месяц.
      Официальные казино Украины обычно работают стабильно.
      Топ честных онлайн казино формируется годами. Рейтинг лучших онлайн казино Украины полезен новичкам. Казино онлайн лучшие — это не только бонусы, но и выплаты. Лучшие казино онлайн выделяются прозрачностью.

      Reply
    2. motoshop on December 18, 2025 4:16 pm

      Удобный каталог мотозапчастей, легко подобрать нужную позицию. Нормальный магазин, особенно если вы в Киеве магазин мотозапчастей в Киеве. Мотозапчасти купить оказалось проще, чем ожидал.
      Здесь реально удобно покупать мототовары. Хороший магазин мотозапчастей для города Киев. Хороший мото магазин запчасти с актуальными позициями. Удобно заказывать запчасти на мото прямо с телефона. Магазин запчастей для мотоциклов с нормальным сервисом. Понравилось, что есть всё — от мелочей до крупных узлов. Подходит как для города, так и для дальних заказов.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • StevenCaf on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • MichaelAffew on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    January 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.