ಹೈದರಾಬಾದ್.
ರಕ್ತ ಚಂದನ ಕಳ್ಳ ಸಾಗಾಣಿಕೆದಾರರ ಕುರಿತಾದ ಸಿನಿಮಾ ಪುಷ್ಪ ಮೂಲಕ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ಬಹು ನಿರೀಕ್ಷಿತ ಪುಷ್ಪ ತೆಲುಗು ಆವೃತ್ತಿ ಬಿಡುಗಡೆಯಾದ ನಂತರ ಆ ಸಿನಿಮಾದ ಪ್ರಚಾರಕ್ಕಾಗಿ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಡಿಸೆಂಬರ್ 4ರಂದು ಹೈದರಾಬಾದ್ ನ
ಸಂಧ್ಯಾ ಥಿಯೇಟರ್ ಗೆ ಆಗಮಿಸಿ ಅಭಿಮಾನಿಗಳೊಂದಿಗೆ ಸಿನಿಮಾ ವೀಕ್ಷಿಸುತ್ತಿದ್ದರು.
ಅಲ್ಲು ಅರ್ಜುನ್ ಸಿನಿಮಾ ವೀಕ್ಷಿಸಲು ತಾವು ಚಿತ್ರಮಂದಿರಕ್ಕೆ ಬರುತ್ತಿರುವ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಅಲ್ಲದೆ ತಮ್ಮ ಭದ್ರತೆಗಾಗಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿಕೊಂಡಿದ್ದರು.
ಅಲ್ಲು ಅರ್ಜುನ್ ಸಿನಿಮಾ ವೀಕ್ಷಿಸಲು ಬರುತ್ತಿದ್ದಾರೆ ಎಂಬ ಮಾಹಿತಿ ಅವರ ಅಭಿಮಾನಿಗಳಿಗೆ ತಿಳಿದು ಅವರನ್ನು ವೀಕ್ಷಿಸಲು ದೊಡ್ಡ ಪ್ರಮಾಣದಲ್ಲಿ ಸಿನಿಮಾ ಮಂದಿರಕ್ಕೆ ಧಾವಿಸಿದ್ದರು.
ಈ ವೇಳೆ ಅಲ್ಲು ಅರ್ಜುನ್ ಅವರನ್ನು ನೋಡಲು ಅವರ ಆಟೋಗ್ರಾಫ್ ಪಡೆಯಲು ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿ ಬಿದ್ದಿದ್ದರು ಇದರಿಂದ ದೊಡ್ಡ ಪ್ರಮಾಣದಲ್ಲಿ ಕಾಲ್ತುಳಿತ ಉಂಟಾಗಿತ್ತು ಈ ಕಾಲ್ತುಳಿತದಲ್ಲಿ ಸಿಲುಕಿದ ಒಬ್ಬ ಮಹಿಳೆ ನಿಧನ ಹೊಂದಿದರೆ,ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು.
ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ಚೀಕಟಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.