ಬೆಂಗಳೂರು,ಜು.12-
ಕರೆದ ಸ್ಥಳಕ್ಕೆ ಬರುವುದಿಲ್ಲ, ನಿಗಧಿತ ಮೀಟರ್ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಸಲ್ಲಿಸುವ ಆಟೋಚಾಲಕರೇ ಹುಷಾರ್.. ಬೆಂಗಳೂರು ಪೊಲೀಸರು ನಿಮ್ಮನ್ನು ಗಮನಿಸುತ್ತಿದ್ದಾರೆ.ನಿಮಗೆ ದುಬಾರಿ ದಂಡ ಮಾತ್ರವಲ್ಲ ಆಟೋ ಕೂಡ ವಶಪಡಿಸಿಕೊಳ್ಳಲಿದ್ದಾರೆ.
ಪ್ರಯಾಣಿಕರ ಬಳಿ ದುಬಾರಿ ಹಣ ಸುಲಿಗೆ ಮಾಡುತ್ತಿದ್ದ ಆಟೋ ಚಾಲಕರ ವಿರುದ್ಧ ಆರ್‌ಟಿಓ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕಳೆದ ವಾರ ಒಂದು ಸಾವಿರಕ್ಕೂ ಹೆಚ್ಚು ಆಟೋಗಳಿಗೆ ಶಾಕ್ ನೀಡಿದ್ದಾರೆ.
ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದ ಬೆನ್ನಲ್ಲೇ ಆಟೋ ಚಾಲಕರು ಪ್ರಯಾಣಿಕರ ಬಳಿ ದುಪ್ಪಟ್ಟು ದರ ವಸೂಲಿಗೆ ಮುಂದಾದ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ತಂಡಗಳ ರಚನೆ ಮಾಡಿ ವಲಯ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿತ್ತು.ಈ ವೇಳೆ ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋಗಳ ವಿರುದ್ಧ ಕ್ರಮಕೈಗೊಂಡಿದೆ.
ಕಳೆದ ಒಂದು ವಾರದಿಂದ ನಗರದ 11 ಆರ್‌ಟಿಓ ಕಚೇರಿ ವ್ಯಾಪ್ತಿಯಲ್ಲಿ 20 ತಂಡಗಳನ್ನ ರಚಿಸಿ ಸಾರಿಗೆ ಅಧಿಕಾರಿಗಳು ನಗರದಾದ್ಯಂತ ಕಾರ್ಯಚರಣೆ ಕೈಗೊಂಡಿದ್ದಾರೆ.
ಈ ವೇಳೆ ಒಟ್ಟು 3,531 ಆಟೋಗಳನ್ನು ತಪಾಸಣೆ ನಡೆಸಿದ್ದು, ಅದರಲ್ಲಿ ಪರ್ಮೀಟ್, ದುಪ್ಪಟ್ಟು ದರ ವಸೂಲಿ ವಿಮೆ,ಸರಿಯಾದ ದಾಖಲೆಯಿಲ್ಲದ 1,006 ವಾಹನಗಳ ವಿರುದ್ಧ ಕೇಸ್ ದಾಖಲಿಸಿ, 233 ಆಟೋಗಳನ್ನು ಜಪ್ತಿ ಮಾಡಿದ್ದಾರೆ.
ಆಟೋಗಳ ಪೈಕಿ ಅತಿ ಹೆಚ್ಚು ಆಟೋಗಳು ಆ್ಯಪ್ ಆಧಾರಿತ ಸಂಚಾರ ಮಾಡುತ್ತಿದ್ದ ಆಟೋಗಳೇ. ನಗರವ್ಯಾಪಿ ಆ್ಯಪ್ ಆಧಾರಿತ ಆಟೋಗಳ ಮೇಲೆಯೇ ಅತಿ ಹೆಚ್ಚು ದೂರಗಳಿದ್ದು, ಅದರಂತೆ ಆಯಾ ವ್ಯಾಪ್ತಿಯಲ್ಲಿ ಹೆಚ್ಚುವರಿ ದರ ಪಡೆದು ಸಂಚಾರ ಮಾಡುತ್ತಿದ್ದ ಆ್ಯಪ್ ಆಧಾರಿತ ಆಟೋಗಳಿಗೂ ಆರ್‌ಟಿಓ ಬಿಸಿ ಮುಟ್ಟಿಸಿದೆ.
ಆ್ಯಪ್‌ಗಳ ಆಟೋ ವಿರುದ್ಧ ಕ್ರಮ
ಆ್ಯಪ್ – ಕೇಸ್ ದಾಖಲು – ಸೀಜ್
ಓಲಾ – 35 – 4
ಊಬರ್ – 59 – 14
ರ‍್ಯಾಪಿಡೋ – 92 – 32
ನಮ್ಮಯಾತ್ರಿ – 25 – 4
ಇತರೆ ಆ್ಯಪ್ – 795 – 179
Previous Articleಸುರ್ಜೇವಾಲಾ ಬದಲಾವಣೆಗೆ ತಂತ್ರ.
Next Article ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

