ಬೆಂಗಳೂರು:ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ರಾಜ್ಯ ಸರ್ಕಾರ
ಸುತ್ತೋಲೆ ಹೊರಡಿಸಿದೆ.
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಬುಧವಾರ ಸುತ್ತೋಲೆ ಹೊರಡಿಸಿ ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ.
ಒಂದು ವೇಳೆ ಸೂಚನೆಗಳನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸುತ್ತೋಲೆಯಲ್ಲೇನಿದೆ:
ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆಯನ್ನು ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.
ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಶಿಸ್ತುಕ್ರಮದ ಎಚ್ಚರಿಕೆ:
ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಒಂದು ವೇಲೆ ಸೂಚನೆಗಳನ್ನ ಉಲ್ಲಂಘಿಸಿದರೆ ಅವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ನಾಮಫಲಕಗಳಲ್ಲಿ ಕನ್ನಡ ಮಾಯ
ಸರ್ಕಾರಿ ಮತ್ತು ಖಾಸಗಿ ಸಂಸ್ಥೆ, ಎಲ್ಲಾ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಕನ್ನಡಲ್ಲೇ ಹಾಕಬೇಕೆಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡಿದ್ದವು. ಇದಕ್ಕೆ ಮಣಿದ ಸರ್ಕಾರ, ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದು ನಾಮಫಲಕಗಳಲ್ಲಿ ಕನ್ನಡಕ್ಕೆ ಪ್ರಾಧನ್ಯತೆ ನಿಡಬೇಕು. ಶೇ. 60ರಷ್ಟು ಕನ್ನಡ ಭಾಷೆ ಉಳಿದ 40 ಅನ್ಯಭಾಷೆ ಬಳಕೆ ಕಡ್ಡಾಯಗೊಳಿಸಿದ್ದರೂ ಇದು ಸಂಪೂರ್ಣವಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಲಾಖೆಗಳಲ್ಲಿ ಕನ್ನಡ ಬಳಕೆ ಬಗ್ಗೆ ಮಹತ್ವದ ಸೂತ್ತೋಲೆ ಹೊರಡಿಸಿದ್ದು, ಇದು ಸಮರ್ಪಕವಾಗಿ ಕಾರ್ಯರೂಪಕ್ಕೆ ಬರುತ್ತೆ ಎಂದು ಕಾದುನೋಡಬೇಕಿದೆ
Previous Articleಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?
Next Article ವರ್ಷಾಂತ್ಯಕ್ಕೆ ಸರ್ಕಾರದಲ್ಲಿ ಬದಲಾವಣೆ ನಿಶ್ಚಿತ.

2 Comments
Discovering how to develop authentic brand voice for Instagram niches is essential for creators who want genuine audience connection rather than chasing algorithms. Most Instagram accounts in saturated verticals rely on identical messaging templates and trending formats, which dilutes their credibility and shrinks engagement rates over time. This guide walks you through identifying your unique perspective, translating your values into consistent communication patterns, and building a tonality that feels natural to your audience rather than forced or corporate. The methodology covers personality mapping, language choice alignment with your niche community, and authentic storytelling frameworks that convert followers into loyal advocates. Whether you’re launching a wellness brand, tech commentary page, or lifestyle community, establishing a distinctive voice early prevents costly rebranding cycles later and accelerates trust-building with your ideal audience.
Accessing https://npprteam.shop/en/articles/reddit/how-to-get-insights-in-reddit-subreddits-a-map-of-intentions-and-pains/ provides a structured framework for turning Reddit community discussions into actionable strategic intelligence. The resource walks through identifying high-intent subreddits, decoding user motivation layers, and building competitive intelligence maps that inform product positioning and customer acquisition strategy. Performance marketers, content creators, and product teams benefit from learning how to systematically extract and organize insights that typically require months of scattered research to uncover. Using Reddit as a primary research channel positions your team ahead of competitors who rely solely on industry reports and surveys. Start leveraging this untapped intelligence source to validate assumptions and scale campaigns with greater confidence.