ಬೆಳಗಾವಿ,ಡಿ.9-
ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಆರಂಭವಾದ ಬೆನ್ನಲ್ಲೇ ಮತ್ತೊಮ್ಮೆ ಗಡಿ ವಿವಾದ ಪ್ರಸ್ತಾಪಿಸುವ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ ಖ್ಯಾತೆ ತೆಗೆದಿದೆ.ಇದಕ್ಕೆ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಮೈತ್ರಿಕೂಟದ ಶಿವಸೇನೆ ಸಾಥ್ ನೀಡಿದೆ.
ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.ಆದಿತ್ಯ ಠಾಕ್ರೆ ಇಂತಹ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ.
ಉದ್ದವ್ ಠಾಕ್ರೆ ನೇತೃತ್ವದ ಬಣ ಗಡಿ ವಿಚಾರವನ್ನು ಕೆದಕುವುದು ಹೊಸದೆನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ ಠಾಕ್ರೆ ಈಗ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದಾರೆ.