ಬೆಂಗಳೂರು, ಜೂ.20:
ಬೆಳಗಾವಿ, ತುಮಕೂರು, ಹುಬ್ಬಳ್ಳಿ -ಧಾರವಾಡ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಗೆ ವಿನೂತನ ಮಾರ್ಗ ಅನುಸರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಣೆ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಬಗ್ಗೆ ಅಧಿಕಾರಿಗಳ ಮಾಹಿತಿ ಪಡೆದು ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
ಸುದೀರ್ಘ ಚರ್ಚೆಯ ಬಳಿಕ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಹಾಗೂ ಬಾಕಿ ವಸೂಲಾತಿ ಮಾಡಲು ಸ್ಥಳೀಯ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಒಪ್ಪಿಗೆ ನೀಡಲಾಯಿತು ಎಂದರು.
ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಬರಲಿದೆ. ಶೇ.30 ರಿಂದ 40 ರಷ್ಟು ಬಾಕಿ ವಸೂಲಿಯಾಗಿಲ್ಲ. ಹೀಗಾಗಿ ಸ್ವಸಹಾಯ ಸಂಘಗಳಿಗೆ ವಸೂಲಿ ಮಾಡಲು ಅವಕಾಶ ಕಲ್ಪಿಸಿದ್ದು, ಶೇ.5 ರಷ್ಟು ಪ್ರೋತ್ಸಾಹ ಧನ ಸಂಘಗಳಿಗೆ ಸಿಗಲಿದೆ ಎಂದು ಹೇಳಿದರು
ಬಾಹ್ಯ ನೆರವಿನೊಂದಿಗೆ ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ.ಗಳ ಗ್ರಾಮೀಣ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು 2 ವರ್ಷಗಳೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು.
ನ.26 ರ ಸಂವಿಧಾನ ದಿನಾಚರಣೆ ಮತ್ತು ಆ.15 ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು
ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಯೋಜನೆಯನ್ನು 29.19 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತಕ ಅನುಮೋದನೆ ನೀಡಿದೆ ಎಂದು ಹೇಳಿದರು.
ಪ್ರಧಾನಿ ಉಚ್ಚತರ್ ಅಭಿಯಾನ ಯೋಜನೆಯಡಿ ರಾಜ್ಯದ 6 ವಿವಿಗಳನ್ನು ಮೇಲ್ದರ್ಜೆಗೇರಿಸಲು 279.77 ಕೋಟಿ ರೂ.ಗಳ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ಅನುದಾನದಡಿ ಮೂಲ ಸೌಕರ್ಯ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‌ನ್ಯಾಷನಲ್‌ರವರ ಸಹಭಾಗಿತ್ವದೊಂದಿಗೆ 2.37 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ದೊರೆತಿದೆ ಎಂದರು.
ಕೆಜಿಎಫ್ ಗಣಿ ಗುತ್ತಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, 1300 ಎಕರೆ ಪ್ರದೇಶದಲ್ಲಿ ಗುತ್ತಿಗೆಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಈ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಸಮತಿ ಸೂಚಿಸಲಾಗಿದೆ. ಮರು ಗುತ್ತಿಗೆಯಿಂದ ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಕೈಗಾರಿಕಾ ವಸಾಹತು ಸ್ಥಾಪನೆಗೂ ಅನುಕೂಲವಾಗಲಿದೆ. ಹೀಗಾಗಿ ಸಂಪುಟ ಸಭೆ ವಿಶೇಷ ಅನುಮತಿಯನ್ನು ನೀಡಿದೆ ಎಂದರು.
ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ದಿನಾಂಕವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
Previous Articleಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ
Next Article ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ


1 Comment
Mostbet entrega o que promete: bГґnus de 125% + 250 free spins na hora – https://mostbetpt.pro/mostbet-app/ , No Mostbet vocГЄ recebe 144% de bГґnus + 300 free spins para arrasar nos jogos .