ನವದೆಹಲಿ,ಆ.29 : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿ, ದೇಶ ವಿದೇಶಗಳಲ್ಲಿ ಸದ್ದು ಮಾಡಿದ್ದ ಹಿಜಾಬ್ ಕುರಿತಾದ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ
ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು, ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಸೆ. 5ಕ್ಕೆ ಮುಂದೂಡಿತು .
ಕಳೆದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹೇರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ವಿಚಾರಣೆ ನಡೆಸಿದ್ದ ಹೈಕೋರ್ಟ್,ಸರ್ಕಾರದ ಸಮವಸ್ತ್ರ ನೀತಿಯನ್ನು ಮಾರ್ಚ್ 15ರ ತನ್ನ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.
ಹೈಕೋರ್ಟ್ ನ ಈ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
Previous Articleಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
Next Article ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಬೇಡ