Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಅಂತಿಂಥಾ ರಸ್ತೆಯಲ್ಲ…!
    ಸುದ್ದಿ

    ಇದು ಅಂತಿಂಥಾ ರಸ್ತೆಯಲ್ಲ…!

    vartha chakraBy vartha chakraDecember 23, 202436 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.23:
    ಇದು ಅಂತಿಂಥ ಹೆದ್ದಾರಿಯಲ್ಲ.ವಾಹನ ಸವಾರರು ಮೇಲೆ ಅಪಘಾತವೆಂಬ ತೂಗುಗತ್ತಿ ಝಳಪಿಸುವ ಹೆದ್ದಾರಿ.ಸ್ವಲ್ಪ ಯಾಮಾರಿದರೂ ಸಾಕು ಅಪಘಾತ ಕಟ್ಟಿಟ್ಟ ಬುತ್ತಿ ಅದುವೆ ರಾಷ್ಟ್ರೀಯ ಹೆದ್ದಾರಿ 4.
    ಅದರಲ್ಲೂ ನೆಲಮಂಗಲದಿಂದ ತುಮಕೂರುವರೆಗಿನ ಪ್ರಯಾಣ‌ ಒಂದು ರೀತಿಯಲ್ಲಿ ತಂತಿ ಮೇಲಿನ ನಡಿಗೆ ಎಂದು ಹೇಳಬಹುದು.
    ಮೊನ್ನೆಯಷ್ಟೇ ಈ ರಸ್ತೆಯಲ್ಲಿ ಕಾರಿನ ಮೇಲೆ ಕಂಟೇನರ್ ಬಿದ್ದು ಆರು ಮಂದಿ ಮೃತಪಟ್ಟರು. ಈ ಪ್ರಕರಣದ ಬೆನ್ನಲ್ಲೇ, ಹೊರಬಂದ ಅಂಕಿ ಅಂಶಗಳು
    ನೆಲಮಂಗಲ ಸಂಚಾರ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯ ಅಪಘಾತಗಳ ತಾಣ ಎಂದು ತಿಳಿಸಿದೆ
    ನೆಲಮಂಗಲ ಸಂಚಾರ ಠಾಣಾ ವ್ಯಾಪ್ತಿಯ ನೆಲಮಂಗಲದ ಮಾದನಾಯಕನಹಳ್ಳಿ ಠಾಣಾ ದಾಖಲೆಯಲ್ಲಿ ಈ ವರ್ಷ 1500ಕ್ಕೂ ಅಪಘಾತಗಳು ಸಂಭವಿಸಿ ಮೊದಲ ಸ್ಥಾನ ಪಡೆದುಕೊಂಡಿದೆ.
    ಇದು ಮುಂದುವರೆದು ನೆಲಮಂಗಲ ಸಂಚಾರಿ ಠಾಣೆಯಲ್ಲೇ ಅತಿ ಹೆಚ್ಚು ಅಪಘಾತ ಪ್ರಕರಣಗಳು ಸಂಭವಿಸಿವೆ ಎಂದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.
    2024 ರ ಜನವರಿಯಿಂದ ಡಿಸೆಂಬರ್ ಮೊದಲ ವಾರದವರೆಗೆ 144 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಬರೋಬ್ಬರಿ 148 ಜನರು ಸಾವನ್ನಪ್ಪಿದ್ದಾರೆ ಎನ್ನುವ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಈ ಮೂಲಕ ನೆಲಮಂಗಲ ತಾಲೂಕು ರಾಜ್ಯದ ಪ್ರಮುಖ ಅಪಘಾತದ ಕೇಂದ್ರವಾಗಿ ಹೊರಹೊಮ್ಮಿದೆ. ನೆಲಮಂಗಲ ರಾಜ್ಯದ 23 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಗೇಟ್‌ವೇ ಆಗಿದ್ದು, ರಾಷ್ಟ್ರೀಯ ಹೆದ್ದಾರಿ 48 (ಬೆಂಗಳೂರು-ತುಮಕೂರು) ಮತ್ತು (ಹಾಸನ-ನೆಲಮಂಗಲ) ಹೆದ್ದಾರಿ 75 ಎರಡು ಹೆದ್ದಾರಿಗಳನ್ನು ಸಂದಿಸುವ ಪ್ರಮುಖ ಕೇಂದ್ರ ಆಗಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗಿವೆ.
    ಹೆಚ್ಚು ಅಪಘಾತಕ್ಕೆ ಕಾರಣಗಳೇನು?
    ನೆಲಮಂಗಲ ತುಮಕೂರು ಹೆದ್ದಾರಿ ದಶಪಥ ರಸ್ತೆಯನ್ನಾಗಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿ ಕಾಮಗಾರಿ ವಿಳಂಬದಿಂದ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಸುಮಾರು 70ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ, ಎರಡು ನಗರಗಳು ಒಂದು ಪಟ್ಟಣಕ್ಕೆ ಒಂದೇ ಸಂಚಾರಿ ಠಾಣೆ ಇದೆ. ಅಲ್ಲದೆ ಈ ಸಂಚಾರಿ ಠಾಣೆಯಲ್ಲಿ ಕಡಿಮೆ ಸಿಬ್ಬಂದಿ ಕಾರಣ ಹೆದ್ದಾರಿಗಳಲ್ಲಿ ಸಂಚಾರ ಮುಕ್ತ ಮಾಡಲು ಕಷ್ಟಸಹಜವಾಗಿದೆ. ಈ ನಡುವೆ ಹೆದ್ದಾರಿಗಳಲ್ಲಿ ರಾಜಕಾರಣಿಗಳು,ಸಚಿವರು, ಸೇರಿದಂತೆ ಗಣ್ಯರು ಸಂಚರಿಸುವುದರಿಂದ ಸಿಬ್ಬಂದಿ ಕೊರತೆ ಹೆಚ್ಚಳವಾಗಿದೆ. ಈ ನಡುವೆ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಕಂಪನಿಗಳು ಬರೀ ಹಣ ಸಂಗ್ರಹ ಮಾಡುವುದು ಮಾತ್ರ ನಮ್ಮ ಕರ್ತವ್ಯ ಎಂದು ನಿರ್ಲಕ್ಷ್ಯ ತೋರುತ್ತಿವೆ.
    ಈ ಎಲ್ಲಾ ಗಂಭೀರ ಸಮಸ್ಯೆಗಳನ್ನು ಗೃಹ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರ ವರದಿ ಪಡೆದುಕೊಂಡಿದೆ.

    Verbattle
    Verbattle
    Verbattle
    ಅಪಘಾತ ತುಮಕೂರು Bengaluru ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಿರಾಟ್ ಒಬ್ಬ ಬುಲೀ (Bully) ಎಂದು ಕರೆದ ಆಸ್ಸಿ ಮೀಡಿಯಾ
    Next Article ರಾಬಿನ್ ಉತ್ತಪ್ಪ ಹೀಗೇಕೆ ಮಾಡಿದರು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • Daviddek on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Daviddek on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.