ಬೆಂಗಳೂರು,ಫೆ.27:
ಮನುಷ್ಯರ ಆರೋಗ್ಯನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಪ್ರಯೋಗಾಲಯದ ವರದಿಗಳ ಹಿನ್ನೆಲೆಯಲ್ಲಿ ಖಾದ್ಯ ವಸ್ತುಗಳ ತಯಾರಿಕೆಗೆ ಬಳಸಲಾಗುತ್ತಿದ್ದ ಕೃತಕ ಬಣ್ಣ ಮತ್ತು ರಾಸಾಯನಿಕಗಳನ್ನು ನಿಷೇಧಿಸಿರುವ ರಾಜ್ಯ ಸರ್ಕಾರ ಇದೀಗ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲು ಮುಂದಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಕಡೆ ಹೋಟೆಲ್ ಗಳಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಸುತ್ತಿದ್ದಾರೆ ಅದೇ ರೀತಿಯಲ್ಲಿ ಪಾರ್ಸೆಲ್ ನೀಡುವಾಗ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ನಡೆಸಿದ ತಪಾಸಣೆಯಲ್ಲಿ 51 ಮಾದರಿಗಳು ಅಸುರಕ್ಷಿತ ಎಂಬ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು. ಬಟ್ಟೆ ಬಳಸಿ ಇಡ್ಲಿ ತಯಾರಿಸುವಂತೆ ಸಲಹೆ ನೀಡಿದರು.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 500 ಹೋಟೆಲ್‌ಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಪ್ಲಾಸ್ಟಿಕ್ ಬಳಕೆ ಮಾಡುವ ಹೋಟೆಲ್‌ಗಳಿಗೆ ನೋಟಿಸ್ ನೀಡಲಾಗುತ್ತದೆ. ಆಹಾರ ಸುರಕ್ಷತೆ ಸರ್ಕಾರದ ಆಧ್ಯತೆಯಾಗಿದ್ದು, ಜನರ ಹಿತದೃಷ್ಟಿಯಿಂದ ಪ್ಲಾಸ್ಟಿಕ್ ನಿಷೇಧಿಸುತ್ತಿರುವುದಾಗಿ ತಿಳಿಸಿದರು.
ಬಹುತೇಕ ಎಲ್ಲದರಲ್ಲೂ ಕಲಬೆರಕೆ ಕಂಡು ಬಂದಿದೆ. ನಾಳೆ ಸವಿಸ್ತಾರ ವಿವರಗಳೊಂದಿಗೆ ಸರ್ಕಾರದ ಆದೇಶಗಳು ಜಾರಿಯಾಗಲಿವೆ ಎಂದು ಹೇಳಿದರು.
Previous Articleಮೋಹನ್ ದಾಸ್ ಪೈ ಗೆ ಎಂ.ಬಿ.ಪಾಟೀಲ್ ಸಲಹೆ
Next Article ಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು

