Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    ಹವಾಮಾನ

    ಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.

    vartha chakraBy vartha chakraMay 28, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 27:
    ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಎಂದು ವೈದ್ಯಕೀಯ ಶಿಕ್ಷಣ ಕೌಶಲಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
    ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಎಚ್ಚರಿಕೆ ಕೇವಲ ಆರೋಗ್ಯ ಸಿಬ್ಬಂದಿಗೆ ಮಾತ್ರ ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
    ಕೊರೊನಾ ಪ್ರಕರಣಗಳು ಇದ್ದರೂ ಎಲ್ಲರಿಗೂ ಮಾಸ್ಕ್‌ ಕಡ್ಡಾಯ ಮಾಡುವ ಅಗತ್ಯವಿಲ್ಲ. ಜ್ವರ, ಶೀತ, ನೆಗಡಿ ಇದ್ದವರು ಧರಿಸಿದರೆ ಸಾಕು.ನಾವು ಉತ್ತಮವಾಗಿ ಮಾನಿಟರ್ ಮಾಡುತ್ತೇವೆ. ಈ ಬಾರಿ ಮಳೆ ಹೆಚ್ಚಾಗಿದ್ದರಿಂದ ಹವಾಮಾನ ಕೂಡ ಬದಲಾವಣೆ. ಇದರಿಂದಲೂ ಜ್ವರ, ನೆಗಡಿ, ಕೆಮ್ಮು ಬರುತ್ತಿದೆ ಎಂದು ತಿಳಿಸಿದರು
    ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.
    ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ಶೀತ, ನೆಗಡಿ ಬಂದರೆ ಕೂಡಲೇ ಪೋಷಕರಿಗೆ ಕರೆ ಮಾಡಿ ಕಳುಹಿಸಿಕೊಡಬೇಕು ಎಂದರು.
    ಸಾರಿ ಕೇಸ್ ಗಳ ಟೆಸ್ಟಿಂಗ್ ಮಾಡಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ಆಸ್ಪತ್ರೆಯ ನಿರ್ದೇಶಕರೊಂದಿಗೆ ಸಭೆ ನಡೆಸಿದ್ದೇನೆ. ಲ್ಯಾಬ್ ವ್ಯವಸ್ಥೆ, ನಾಲ್ಕು ವಿಭಾಗಗಳಲ್ಲಿ‌ ಟೆಸ್ಟಿಂಗ್ ಮಾಡಲಾಗುತ್ತದೆ. ಆಕ್ಸಿಜನ್ ಬೆಡ್, ವೆಂಟಿಲೇಟರ್‌ ಬಗ್ಗೆ ಮಾಹಿತಿ ತಿಳಿಸಲು‌ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
    ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೋವಿಡ್ ಹೆಚ್ಚಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ.‌ ಜನದಟ್ಟಣೆ ಇರುವ ಸ್ಥಳದಲ್ಲಿ ಹಿರಿಯರು, ಗರ್ಭಿಣಿ ಸ್ತ್ರೀಯರು ಮಾಸ್ಕ್ ಬಳಕೆ ಮಾಡಬೇಕು. ನೆಗಡಿ ಕೆಮ್ಮು ಇರುವ ಮಕ್ಕಳು ಶಾಲೆಗೆ ಹೋಗದಂತೆ ಸೂಚನೆ ನೀಡಲಾಗಿದೆ ಎಂದರು
    ಬೆಂಗಳೂರಿನಲ್ಲಿ ಹೆಚ್ಚು ಕೇಸ್ ದಾಖಲಾಗಿದೆ. ಕೋವಿಡ್ ಪ್ರಕರಣ ಬೆಂಗಳೂರಿನಲ್ಲಿ ಜಾಸ್ತಿ ಆಗ್ತಿದೆ. ಆದರೆ ದೊಡ್ಡ ಪ್ರಮಾಣದಲ್ಲಿ ಹರಡುತ್ತಿಲ್ಲ. ಹಾಗಾಗಿ ಜನರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಸರ್ಕಾರದ ಮಾರ್ಗಸೂಚಿ ಪಾಲಿಸಿದರೆ ಎಲ್ಲರಿಗೂ ಕ್ಷೇಮ. ವ್ಯಾಕ್ಸಿನೇಷನ್‌ ಈಗಾಗಲೇ ಆಗಿದೆ.ಅವಶ್ಯಕತೆ ಇದ್ರೆ ಕೇಂದ್ರ ಆರೋಗ್ಯ ಇಲಾಖೆ ಜೊತೆ ಚರ್ಚೆ ಮಾಡಿ ವ್ಯಾಕ್ಸಿನ್ ತರಿಸುತ್ತೇವೆ ಎಂದು ತಿಳಿಸಿದರು.
    ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಜನರು ಆತಂಕ ಪಡಬೇಕಾದ ಅಗತ್ಯ ಇಲ್ಲ. ಟೆಸ್ಟಿಂಗ್ ಗೆ ಅಗತ್ಯವಿರುವ ಸೌಲಭ್ಯಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು.‌ ಔಷಧ ಲಭ್ಯತೆ ಹಾಗೂ ಆಕ್ಸಿಜನ್ ಬೆಡ್ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ Bengaluru ವಿದ್ಯಾ ವಿದ್ಯಾರ್ಥಿ ಶಾಲೆ ಶಿಕ್ಷಣ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಜನ್ಮ ಜಾಲಾಡಿದ ಪ್ರಿಯಾಂಕ್ ಖರ್ಗೆ .
    Next Article ರಾಜ್ಯಪಾಲರಿಗೆ ಸರ್ಕಾರದ ಮೊರೆ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    January 22, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgeprees on ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • Georgemen on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Daviddek on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    January 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    January 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.