ಚಾಮರಾಜನಗರ,ಫೆ.10-
ಇವರು ಅಂತಿಂಥ ಕಳ್ಳರಲ್ಲ. ಪೊಲೀಸರು ಜಪ್ತಿ ಮಾಡಿ ಠಾಣೆಯ ಕಾಂಪೌಂಡ್ ಆವರಣದಲ್ಲಿ ನಿಲ್ಲಿಸಿದ್ದ ಬೈಕುಗಳನ್ನ ಕದ್ದು ಪರಾರಿಯಾಗಿ ಇದೀಗ ಸಿಕ್ಕಿ ಬಿದ್ದಿದ್ದಾರೆ.
ಚಾಮರಾಜನಗರ ಪೊಲೀಸ್ ಠಾಣೆಯ ಗೇಟಿಗೆ ಹಾಕಿದ್ದ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿದ್ದ ಬೈಕ್ ಕಳವು ಮಾಡಿರುವ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಐನಾತಿ ಕಳ್ಳರಾದ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ. ಬಳಿಕ, ಎನ್ ಡಿ ಪಿ ಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್ ಕದ್ದೊಯ್ದಿದ್ದಾರೆ
ಬೆಳಗ್ಗೆ ಠಾಣೆಗೆ ಬಂದ ಪೊಲೀಸರು ಗೇಟ್ ಬೀಗ ಇಲ್ಲದಿರುವುದನ್ನು ಕಂಡು ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆಯಲಾಗಿದೆ.ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Previous Articleಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್
Next Article ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.