ಮಂಗಳೂರು,ಏ.25-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿ ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಉಳ್ಳಾಲದ ಸತೀಶ್ ಕುಮಾರ್ ನೀಡಿದ ದೂರಿನಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಪೋಸ್ಟ್‌ನಲ್ಲಿ ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳಿವೆ. ದೂರುದಾರರು ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷ್ಯಕ್ಕಾಗಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023ರ ಸೆಕ್ಷನ್ 192 ಮತ್ತು 353(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಫೇಸ್ಬುಕ್ ಪೇಜ್ನ ಡಿಪಿಯಲ್ಲಿರುವ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಎಂದು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
.ನಿಚ್ಚು ಮಂಗಳೂರು ಎಂಬ ಫೇಸ್ಬುಕ್ ಪೇಜ್ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್ ಹಾಕಲಾಗಿದೆ.
ಈ ಪೋಸ್ಟ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ಬುಕ್ ಪೇಜ್ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
Previous Articleನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
Next Article ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ