ಬೆಂಗಳೂರು,ಏ.4-ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಾಗವಾರದಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡವರು. ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಗವಾರದ ಕಚೇರಿಯಲ್ಲಿಯೇ ವಿನಯ್ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್ ಅವರಿಗೆ ಮದುವೆಯಾಗಿ ಮಗು ಇದ್ದು ಕುಟುಂಬವು ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿತ್ತು.
ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಡೆದಿದ್ದಾರೆ. ಸದ್ಯ ಶಿವಮೊಗ್ಗದ ಶಿಕಾರಿಪುರದಲ್ಲಿ ವಿಜಯೇಂದ್ರ ಇದ್ದು ಇಂದು ಅಥವಾ ನಾಳೆ ಪೊನ್ನಣ್ಣ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ.
Previous Articleಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ
Next Article ಹನಿ ಟ್ರ್ಯಾಪ್ ನಲ್ಲಿ 69 ರ ವೃದ್ಧ

2 Comments
Gagnez plus avec Betano. Les nouveaux joueurs https://betanogame.org/fr/ profitent jusqu’Г 500 € de bonus et 100 tours gratuits sur les meilleures machines Г sous. Rejoignez les tables en direct ou placez des paris sportifs avec des cotes d’experts. L’action ne s’arrГЄte jamais.
Feel the win before your eyes even see it – https://gntopama.com/mostbet-20263/ , Where the house edge is just clickbait .