ಬೆಂಗಳೂರು – ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರು ತೀವ್ರಬಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರಿಗೆ ಕುಟುಂಬದ ವೈದ್ಯರು ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಜ್ವರದ ತಾಪ ಕಡಿಮೆಯಾದರೂ ಅತಿಯಾದ ಕೆಮ್ಮಿನಿಂದ ಬಳಲುತ್ತಿದ್ದು ಶನಿವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಯಿತು. ತಕ್ಷಣ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಿಲಾಯಿತು.
ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
Previous ArticleBescom ಗ್ರಾಹಕರಿಗೆ ದರ ಹೆಚ್ಚಳದ ಬರೆ
Next Article ಕರಾಟೆ ಕ್ಲಾಸ್ ನಲ್ಲಿ Terror ತರಬೇತಿ