ಬೆಳಗಾವಿ,ನ.15-
ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಜನ ಸಾಮಾನ್ಯರನ್ನು ವಂಚಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳನ್ನು ನಿಯಂತ್ರಿಸಿ,ವಂಚಕರನ್ನು
ಜೈಲು ಕಂಬಿ ಎಣಿಸುವಂತೆ ಮಾಡಲು ಪೊಲೀಸರು ಕಾರ್ಯತಂತ್ರ ಹೆಣೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೇ ಫೇಸ್ ಬುಕ್ ನಕಲಿ ಗಾದೆ ಸೃಷ್ಟಿಯಾಗುತ್ತಿದೆ
ಅದೂ ಕೂಡಾ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಯಾಗುತ್ತಿವೆ
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಯಾಗಿದೆ.
ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ ಖದೀಮ ಇದರ ಮೂಲಕ ಅಧಿಕಾರಿಯ ಪರಿಚಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ. ಬಳಿಕ, ಹುಟ್ಟು ಹಬ್ಬ ಇದೆ ಎಂದು ಪೋಸ್ಟ್ ಹಾಕಿದ್ದಾನೆ. ಶುಭಾಶಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
ಈ ವಿಚಾರ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದರು.
ಇದಕ್ಕಾಗಿ ಸಿಪಿಐ ಸುನೀಲ್ ನಂದೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ತನಿಖೆ ನಡೆಸಿ, ಅರ್ಬಾಜ್ ಖಾನ್ ಎಂಬಾತನನ್ನು ಬಂಧಿಸಿದ್ದಾರೆ.
ರಾಜಸ್ಥಾನ ಮೂಲದ ಈತ ಇದಕ್ಕಾಗಿ ವ್ಯವಸ್ಥಿತ ಜಾಲವೊಂದನ್ನು ರಚಿಸಿಕೊಂಡಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅದರ ಆಧಾರದಲ್ಲಿ ಪೊಲೀಸರು ಈತನಿಂದ ವಂಚನೆಗೊಳಗಾದವರ ವಿವರ ಸಂಗ್ರಹಿಸುತ್ತಿದ್ದಾರೆ.
ಇದರ ನಡುವೆ ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ .
ಬಳಿಕ, ಮೆಸೆಂಜರ್ ಮುಖಾಂತ ಸಂದೇಶ ಕಳುಹಿಸಿ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ ಈ ವಿಚಾರ ತಿಳಿದ ಆಯುಕ್ತ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
Previous Articleಹೊರಟ್ಟಿ ಅವರನ್ನು ಹೊಡೆಯಲು ಹೋಗಿದ್ರಾ ಜಮೀರ್..?
Next Article ಜಮೀರ್ ಅಹಮದ್ ಖಾನ್ ಗೆ ಲೋಕಾಯುಕ್ತ ಕಂಟಕ..