ನವದೆಹಲಿ,ಜೂ.25-
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿ 18 ಮಂದಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಇತ್ತೀಚೆಗೆ ಇ.ಡಿ. 3.98 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲ(ಇಡಿ)ಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು
Previous Articleಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!
Next Article ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ