ಬೆಂಗಳೂರು,ಜ.7-
ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಇದೀಗ ಔತಣ ಕೂಟದ ರಾಜಕೀಯ ಆರಂಭಗೊಂಡಿದೆ ಗೃಹ ಸಚಿವ ಪರಮೇಶ್ವರ್ ನಾಳೆ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಸೇರಿದ ಶಾಸಕರು ಹಾಗೂ ಮಂತ್ರಿಗಳ ಸಭೆ ಕರೆದಿದ್ದು , ವರಿಷ್ಠರು ಮಧ್ಯ ಪ್ರವೇಶಿಸಿದ್ದಾರೆ.
ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಬದಲಾವಣೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಂತ್ರಿಮಂಡಲ ವಿಸ್ತರಣೆ ನಡೆಯಲಿದೆ ಎಂಬ ಚರ್ಚೆಗಳು ಆರಂಭಗೊಂಡಿರುವ ಬೆನ್ನಲ್ಲೇ ಪರಮೇಶ್ವರ್ ಕರೆದಿರುವ ಔತಣಕೂಟ ಕುತೂಹಲ ಮೂಡಿಸಿದೆ
ಕಳೆದ ವಾರ ಲೋಕೋಪಯೋಗಿ ಇಲಾಖೆ ಮಂತ್ರಿ ಸತೀಶ್ ಜಾರಕಿಹೊಳಿ ಅವರು ನಡೆಸಿದ ಔತಣ ಕೂಟ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು ಇದೀಗ ಪರಮೇಶ್ವರ್ ಅವರು ನಡೆಸುತ್ತಿರುವ ಕೂಟ ಮುಖ್ಯಮಂತ್ರಿ ಹುದ್ದೆಗಾಗಿ ನಡೆಸುತ್ತಿರುವ ಲಾಭಿ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಈ ಔತಣಕೂಟ ಕಾಂಗ್ರೆಸ್ಸಿನಲ್ಲಿ ದೊಡ್ಡ ಸಂಚಲನ ಮೂಡಿಸಿರುವ ಬೆನ್ನಲ್ಲೇ ಹೈ ಕಮಾಂಡ್ ಮಧ್ಯ ಪ್ರವೇಶ ಮಾಡಿದೆ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಪರಮೇಶ್ವರ್ ನಾಳೆ ಆಯೋಜಿಸಿದ್ದ ಔತಣ ಕೂಟವನ್ನು ಮುಂದೂಡಿದ್ದಾರೆ
ಕಳೆದ ವಿಧಾನಸಭೆ Electionಯ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನಡುವೆ ಅಧಿಕಾರ ಹಂಚಿಕೆ ಸೂತ್ರ ಏರ್ಪಟ್ಟಿದ್ದು, ಮೊದಲ ಎರಡುವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿದ ನಂತರ ಮತ್ತೊಂದು ಅವಧಿಗೆ ಬೇರೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿದೆ ಈ ಹುದ್ದೆಯನ್ನು ತಮಗೆ ನೀಡಬೇಕು ಎಂದು ಪರಮೇಶ್ವರ್ ಇದೀಗ ಲಾಬಿ ಆರಂಭಿಸಿದ್ದಾರೆ.
ಇದಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲು ತಮ್ಮ ನಿವಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮಂತ್ರಿಗಳು ಹಾಗೂ ಶಾಸಕರಿಗೆ ಔತಣ ಕೂಟ ಏರ್ಪಡಿಸಿದ್ದರು ಎಂದು ಹೇಳಲಾಗುತ್ತಿದೆ.
ಈ ಔತಣಕೂಟ ರಾಜಕಾರಣ ರಾಜ್ಯ ಕಾಂಗ್ರೆಸ್ಸಿನಲ್ಲಿ ದೊಡ್ಡ ಮಟ್ಟದ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಪಕ್ಷದ ರಾಜ್ಯ ಉಸ್ತುವಾರಿ ನಾಯಕ ಸುರ್ಜೇವಾಲ ಅವರು ಯಾವುದೇ ಶಾಸಕ ಮತ್ತು ಮಂತ್ರಿಗಳು ಈ ರೀತಿಯ ಔತಣಕೂಟ ಸಭೆ ನಡೆಸದಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ
Previous Articleನಕ್ಸಲ್ ಮುಕ್ತವಾಗಲಿದೆ ಕರ್ನಾಟಕ
Next Article ಭ್ರಷ್ಟರ ಬೆವರು ಹರಿಸಿದ ಲೋಕಾಯುಕ್ತ