ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲೇ ಪೊಲೀಸ್ ಪೇದೆಯೊಬ್ಬ ಸಿಕ್ಕಿಬಿದ್ದಿದ್ದಾನೆ.
ನಗರದ ಇನ್ಫೆಂಟ್ರಿ ರಸ್ತೆಯ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಜೇಂದ್ರ ಅಕ್ರಮದಲ್ಲಿ ಭಾಗಿಯಾಗಿ ಪರೀಕ್ಷೆ ಬರೆದು ಪಾಸಾಗಿದ್ದ.
ಗಜೇಂದ್ರ ಇನ್ ಸರ್ವಿಸ್ ಖೋಟಾದಡಿ ಫಸ್ಟ್ ರ್ಯಾಂಕ್ ಪಡೆದಿದ್ದ. ಸ್ಟಾರ್ ಹಾಕಿಕೊಂಡು ಬರುವುದಕ್ಕೂ ತಯಾರಾಗಿದ್ದ. ಅಷ್ಟರಲ್ಲೇ ಅಕ್ರಮ ಎಸಗಿ ಸಿಕ್ಕಿ ಬಿದ್ದಿದ್ದಾನೆ.
ಕೆಲಸ ಮುಗಿಸಿ ಮನೆಗೆ ಹೋಗಲು ತಯಾರಿಯಾಗುತ್ತಿದ್ದ ವೇಳೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
Previous Articleಹೊರಟ್ಟಿ ಬಿಜೆಪಿ ಸೇರ್ಪಡೆ: ಸಭಾಪತಿ ಹುದ್ದೆಗೆ ಗುಡ್ ಬೈ
Next Article ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಖಡ್ಗ