ಬೆಂಗಳೂರು,ನ. 8-
ರಾಜ್ಯ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪElection ಅಖಾಡಕ್ಕೆ ಇದೀಗ ಭರ್ಜರಿ ರಂಗು ಬಂದಿದೆ.ಈ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಆಡಳಿತ ರೂಢ ಕಾಂಗ್ರೆಸ್ ಪಕ್ಷಕ್ಕೆ ಎದಿರೇಟು ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದ್ದಾರೆ.
ಬಿಜೆಪಿ ಶಾಸಕರ ಈ ನಡೆ ಪಕ್ಷದ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.ಅದರಲ್ಲೂ ಉಪ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.
ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾತ್ರವಲ್ಲದೆ ರಾಮನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಎಸ್‌ಟಿ ಸೋಮಶೇಖರ್ ಅವರ ನಡೆ ಬಿಜೆಪಿ ನಾಯಕರಿಗೆ ಇರುಸುಮುರುಸು ಉಂಟು ಮಾಡಿದೆ.ಈ ಹಿಂದೆ ನಡೆದ ವಿಧಾನಪರಿಷತ್ ಉಪ ಚುನಾವಣೆಯ ಸಮಯದಲ್ಲಿ ಕೂಡ ಅವರು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿಯಾಗಿದ್ದ ಜೆಡಿಎಸ್ ನ ಎ.ಪಿ.ರಂಗನಾಥ್ ಅವರನ್ನು ವಿರೋಧಿಸಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರವಾಗಿ ಮತ ಯಾಚಿಸಿದ್ದರು.
Previous Articleಉಡುಪಿಯಲ್ಲಿ ನಕ್ಸಲರಿಗಾಗಿ ಶೋಧ.
Next Article ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ