ಬೆಂಗಳೂರು,ಮಾ.18-
ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ವಿರುದ್ಧ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.
ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಇದ್ದರು ಈ ವೇಳೆ ಅವರು ಕಾರಣವಿಲ್ಲದೆ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು, ತಾವು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.
ಈ ನಡುವೆ ಈ ಘಟನೆಯ ಕುರಿತಂತೆ ಹೆಚ್.ಎಂ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ. ನಮ್ಮ ಮೇಲೆ ದೂರು ನೀಡಿರುವ ಆ ಮಹಿಳೆ ನನ್ನ ಬಳಿ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಆ ಮಹಿಳೆ ಯಾರು ಎನ್ನುವುದು ನನಗೆ ಗೊತ್ತಿಲ್ಲ. ಪದೇ ಪದೇ ರಾಹುಲ್ ಗಾಂಧಿ ಎಂದು ಹೇಳುತ್ತಿದ್ದರು. ಈ ವೇಳೆ ಅವರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಿದ್ದರು. ವಿಡಿಯೋ ಮಾಡಬೇಡಮ್ಮ ಎಂದು ಮೊಬೈಲ್ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ ಅವರು ನನ್ನನ್ನು ಕೊಲೆ ಮಾಡಲು ಬಂದಿದ್ದರು, ಹೊಡೆದರು ಎನ್ನುವುದು ಸರಿಯಲ್ಲ. ” ಎಂದು ಸ್ಪಷ್ಟನೆ ನೀಡಿದರು.
ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದರು.