ಬೆಂಗಳೂರು,ಜೂ.14-
ಕಾಂಗ್ರೆಸ್ ಎಂದಿಗೂ ಯಾರ ವಿರುದ್ಧವೂ ದ್ವೇಷದ ರಾಜಕಾರಣ ಮಾಡುವುದಿಲ್ಲ.ಆದರೆ ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡುವ ಮೂಲಕ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ಅವರು,ದ್ವೇಷದ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್‌ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಜಾಹೀರಾತು ನೀಡಿದ್ದು ನಾವು.ಇದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ಇದರಲ್ಲಿ ರಾಹುಲ್‌ಗಾಂಧಿ ಅವರನ್ನು ಯಾಕೆ ಮಧ್ಯಕ್ಕೆ ತರಲಾಯಿತು. ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು.
ಲೋಕಸಭಾ Electionಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸೋತಿದೆ. ಸೋಲನ್ನು ಒಪ್ಪಿಕೊಳ್ಳುತ್ತೇವೆ. ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿ ಸಿದ್ದೇಗೌಡ ಸೇರಿದಂತೆ ಹಲವರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅದರ ನಂತರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ಸಾಮಾನ್ಯ. ಆರು ತಿಂಗಳಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಜನರ ಭಾವನೆಗಳು, ಕೆಲಸ ಕಾರ್ಯಗಳು ಬದಲಾಗುತ್ತವೆ. ಯಾವುದೂ ಶಾಶ್ವತವಲ್ಲ ಎಂದು ವಿಶ್ಲೇಷಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಈಗ 9 ಸ್ಥಾನಗಳನ್ನು ಗೆದ್ದಿದ್ದೇವೆ. ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಚಿಂತೆ ಮಾಡುವ ಅಗತ್ಯವಿಲ್ಲ. ಮುಂದೆ ನಮ ಸರ್ಕಾರದ ಅಧಿಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು.
Previous Articleದರ್ಶನ್ ಕೊಟ್ಟಿದ್ದ ಹಣ ಜಪ್ತಿ.
Next Article ಯಡಿಯೂರಪ್ಪ ವಿಚಾರಣೆಗೆ ಬಂದರೆ ಸರಿ,ಇಲ್ಲವಾದರೆ..?