ಕಾಂಗ್ರೆಸ್ ಸತ್ಯಶೋಧನಾ ಸಮಿತಿ.
ಬೆಂಗಳೂರು,ಆ.14:
ಲೋಕಸಭೆ Electionಯಲ್ಲಿ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಮುಂದಾಗಿರುವ ಹೈಕಮಾಂಡ್ ಇದೀಗ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಲೋಕಸಭೆ ಚುನಾವಣೆಗೂ ಮೊದಲು ಕನಿಷ್ಠ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು ಎಂದು ಪಣತೊಟ್ಟಿದ್ದ ಹೈಕಮಾಂಡ್ ಇದಕ್ಕಾಗಿ ರಾಜ್ಯದ ಹಲವು ಸಚಿವರಿಗೆ ಗುರಿ ನೀಡಿತ್ತು. ಅಷ್ಟೇ ಅಲ್ಲದೆ ಇದನ್ನು ಸಾಧಿಸಲು ವಿಫಲವಾಗುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಅಂತಹ ಸಚಿವರ ತೆರೆದಂಡಕ್ಕೆ ಮುಂದಾಗಿದೆ.
ಪಕ್ಷ ಸಂಘಟನೆ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ತಯಾರಿ ಕುರಿತಂತೆ ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಂಡ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವರಿಷ್ಠರು ಈ ಬಗ್ಗೆ ಸ್ಪಷ್ಟ ಸೂಚನೆ ರವಾನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಶಿವಕುಮಾರ್ ಸತ್ಯಶೋಧನಾ ಸಮಿತಿ ರಚಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆಹಚ್ಚಲು ವಿಭಾಗವಾರು 5 ಸತ್ಯಶೋಧನಾ ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿ ಎಲ್ಲಾ ಆಯಾಮಗಳಲ್ಲೂ ಅಧ್ಯಯನ ನಡೆಸಿ ತನ್ನ ವಿಸ್ತೃತ ವರದಿಯನ್ನು ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ.