ಬೆಂಗಳೂರು,ಆ.14,:
ವಿಧಾನಸಭೆ Electionಗೂ ಮುನ್ನ ಕಾಂಗ್ರೆಸ್ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಗ್ಯಾರಂಟಿ ಯೋಜನೆ ಘೋಷಣೆ ಮಾಡಿತು.ಈಗ ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ.
ಇದಕ್ಕೆ ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿಲ್ಲ. ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು.ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ ಎಂದು ವಿವರಿಸಿದರು
ಈಗ ಇವುಗಹನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಸಾರಿಗೆ,ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲವಿಲ್ಲದೆ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದು ಸಲಹೆ ಮಾಡಿದರು.
ಬೆಂಗಳೂರು ನಗರದ ಅಭಿವೃದ್ಧಿಗೆ ನಿಗದಿಯಾದ ಅನುದಾನಗಳನ್ನು ವಾಪಸ್ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ ಎಂದು ದೂರಿದರು.
ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ.ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Previous Articleಬೆಂಗಳೂರಿನಲ್ಲಿ ಮತ್ತೆ Work from home.
Next Article ಗ್ಯಾರಂಟಿ ನಿಲ್ಲೋದಿಲ್ಲ ಅಂದ್ರು ಮಂತ್ರಿ ಖಂಡ್ರೆ.