ಪುಣೆ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಪೊಲೀಸ್ ಸಬ್ ಇನ್ಸಪೆಕ್ಟರ್ ನೇಮಕಾತಿ ಕರ್ಮಕಾಂಡದ ಪ್ರಮುಖ ಆರೋಪಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ರಮ ಹಗರಣ ಬೆಳಕಿಗೆ ಬಂದು ಬರೋಬ್ಬರಿ 18 ದಿನಗಳ ಬಳಿಕ ಆರೋಪಿ ದಿವ್ಯಾ ಹಾಗರಗಿಯ ಬಂಧನವಾಗಿದೆ.
ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದ್ದು ಇದೇ ವೇಳೆ ಮತ್ತೋರ್ವ ಆರೋಪಿಯಾಗಿದ್ದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿ ಹಾಗು ಶಿಕ್ಷಕಿ ಅರ್ಚನಾರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪುಣೆಯ ಹೋಟೆಲ್‍ವೊಂದರಲ್ಲಿ ತಂಗಿದ್ದರು
ಕಲಬುರಗಿಯ ಬಿಜೆಪಿ ನಾಯಕಿಯಾಗಿರುವ ದಿವ್ಯಾ ಹಾಗರಗಿ ಅವರ ಒಡೆತನದ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪಿಎಸ್ಐ ನೇಮಕಾತಿಯ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ ಸಾಬೀತಾಗಿದೆ. ಆದರೆ ಈ ವಿಚಾರ ಹೊರಬರುತ್ತಿದ್ದಂತೆ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದರು.
ಇತ್ತೀಚೆಗಷ್ಟೇ ಈ ಪ್ರಕರಣದ ಪ್ರಮುಖ ಆರೋಪಿಯಾದ ಅಫಜಲಪುರ ಬ್ಲಾಕ್‍ನ ಕಾಂಗ್ರೆಸ್ ಅಧ್ಯಕ್ಷನ ಸಹೋದರನಾಗಿರುವ ಕಿಂಗ್ ಪಿನ್ ಆರ್.ಡಿ. ಪಾಟೀಲ್‍ನನ್ನು ಪೊಲೀಸರು ಬಂಧಿಸಿದ್ದರು.
Previous Articleಶರದ್ ಪವಾರ್ ಕಮಾಲ್….
Next Article ಕಮಲಿ ಸೀರಿಯಲ್ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್