ಬೆಂಗಳೂರು,ಜು.15-ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಎಂಆರ್ಟಿ ಮ್ಯೂಸಿಕ್ನ ಪಾಲುದಾರಿಕೆ ಹೊಂದಿರುವ ನವೀನ್ ಕುಮಾರ್ ಅವರು
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.
ಕಳೆದ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ 2024ರ ಮಾರ್ಚ್ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.
ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಕಿರಿಕ್ ಪಾರ್ಟಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪೊಲೀಸರಿಗೆ ದೂರು.
Previous ArticleED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
Next Article D.K.ಶಿವಕುಮಾರ್ Shoes ಎಗರಿಸಿದ ಕಳ್ಳರು.