ಮಂಗಳೂರು.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ನಾಗ ದೋಷ ಸಂಬಂಧಿ ಪೂಜೆಗಳಿಗಾಗಿ ಪ್ರಸಿದ್ಧಿ
ಅದರಲ್ಲೂ ಆಶ್ಲೇಷ ಬಲಿ ಹಾಗೂ ಸರ್ಪ ಸಂಸ್ಕಾರ ಇಲ್ಲಿ ನಡೆಸಿದಾಗ ಮಾತ್ರ ನಿಜವಾದ ಫಲ ಸಿಗುವುದು ಎಂಬ ನಂಬಿಕೆ ಇದೆ.
ಹಾವನ್ನು ಸಾಯಿಸಿದರೆ, ಅಥವಾ ಅದು ಸತ್ತು ಬಿದ್ದಿದ್ದನ್ನು ನೋಡಿದರೆ ಅದಕ್ಕೆ ಸಂಪೂರ್ಣ ಸಂಸ್ಕಾರ ಕ್ರಿಯೆ ಮಾಡಲೇಬೇಕು. ಇಲ್ಲದಿದ್ದಲ್ಲಿ ಸರ್ಪಹತ್ಯೆ ದೋಷ ಉಂಟಾಗುತ್ತದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಸರ್ಪ ಸಂಸ್ಕಾರ ನಡೆಸಲಾಗುತ್ತದೆ.
ಸುಮಾರು 5000 ವರ್ಷಗಳ ಹಿಂದೆ ಕುಮಾರಧಾರಾ ನದಿ ದಂಡೆಯಲ್ಲಿ ಸುಬ್ರಹ್ಮಣ್ಯ ದೇವಾಲಯವನ್ನು ಇಲ್ಲಿ ನಿರ್ಮಿಸಲಾಗಿದೆ.
ಆಗಿಂದಾಗ್ಗೆ ಈ ದೇವಾಲಯಕ್ಕೆ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ.
ಇದೀಗ ಬಾಲಿವುಡ್ ಬೆಡಗಿ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಕತ್ರೀನಾ ಕೈಫ್ ಸಂತಾನ ಪ್ರಾಪ್ತಿ ಕೋರಿ ಕುಕ್ಕೆ ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿಸಿದ್ದಾರೆ.
ಮುಖಕ್ಕೆ ಮಾಸ್ಕ್ ಧರಿಸಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದ ಅವರು ಕುಕ್ಕೆಯಲ್ಲಿ ವಾಸ್ತವ್ಯ ಹೂಡಿದ್ದು ಸರ್ಪ ಸಂಸ್ಕಾರ ನೇರವೇರಿಸಿದರು.
Previous Articleಚಿನ್ನ ಕದ್ದ ಉಪನ್ಯಾಸಕಿ
Next Article ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ