ಬೆಂಗಳೂರು,ಆ.20:
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೆ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರಿಗೆ ಗಂಡಾಂತರ ಎದುರಾಗಿದೆ.
ದಶಕಗಳ ಹಿಂದಿನ ಪ್ರಕರಣವೊಂದಕ್ಕೆ ಹಠಾತ್ ಮರು ಜೀವ ಸಿಕ್ಕಿದ್ದು, ಎಲ್ಲರ ಗಮನ ಇದೀಗ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರತ್ತ ನೆಟ್ಟಿದೆ.
ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದ ವೇಳೆ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ ಬಳ್ಳಾರಿಯಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತಾಗಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ನಡೆಸಿದ ತನಿಖೆಯಲ್ಲಿ ಕುಮಾರಸ್ವಾಮಿ ಅವರು ನಿಯಮ ಉಲ್ಲಂಘಿಸಿರುವ ಅಂಶ ಬೆಳಕಿಗೆ ಬಂದಿದೆ ಇದರ ಆಧಾರದಲ್ಲಿ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ವಿಶೇಷ ತನಿಕಾ ತಂಡ ಕುಮಾರಸ್ವಾಮಿ ವಿರುದ್ಧ ಎಫ್ ಐ ಆರ್ ದಾಖಲಿಸಲು ಅನುಮತಿ ಕೋರಿದೆ.
ರಾಜ್ಯಪಾಲರು ಎಸ್ಐಟಿಯ ಮನವಿಯನ್ನು ಪುರಸ್ಕರಿಸದಲ್ಲಿ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಲಿದ್ದಾರೆ.