ಬೆಂಗಳೂರು, ಆ.5:
ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಮಾತಿನ ಜಟಾಪಟಿ ತೀವ್ರಗೊಂಡಿದೆ.
ತಮ್ಮ ಆಸ್ತಿ ವಿವರ ಕೇಳಿದ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಕುಮಾರ್,ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಸವಾಲು ಹಾಕಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿಮ್ಮ
ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡರು ಎಂಬುದನ್ನು ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಹಾಗೆಯೇ ನಾನು ಅವರ ಸಹೋದರನ ಆಸ್ತಿ ವಿವರ ಕೆಳುತ್ತಿದ್ದೇನೆ ಈ ಬಗ್ಗೆ ಮೊದಲು ಉತ್ತರ ನೀಡಲಿ ಎಂದರು
ತಾವು ಹಲವು ಬಾರಿ ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ.ನಾನಕ ಭ್ರಷ್ಟಾಚಾರದ ಪಿತಾಮಹಾ ಎಂದು ವಿಜಯೇಂದ್ರ ಹೇಳುತ್ತಾನೆ., ನೀನು ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಮೊದಲು ಹೇಳು ಎಂದು ಪ್ರಶ್ನಿಸಿದರು
ನಿಮ್ಮ ತಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ
ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲಾ ಆಯಿತು ಇದರ ಲೆಕ್ಕಾಚಾರ ಮೊದಲು ನೀಡು.ಇದ ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್ ಗೆ ಉತ್ತರ ಕೊಡಿ ಆನಂತರ ನನಗೆ ಕೊಡುವಿರಂತೆ” ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ” ಎಂದರು.
Previous Articleಸಿಎಂ ಮತ್ತು ಡಿಸಿಎಂ ಬೆಂಬಲಕ್ಕೆ ನಿಂತ ಹೈಕಮಾಂಡ್.
Next Article ರಾಜ್ಯಪಾಲರಿಗೆ ವಕೀಲರು ಕೊಟ್ಟ ಸಲಹೆ ಗೊತ್ತಾ
6 Comments
get cheap clomid without rx order cheap clomid without dr prescription order cheap clomid buy generic clomid without dr prescription can i buy generic clomiphene tablets can you buy generic clomid without insurance where can i get cheap clomid without prescription
I couldn’t turn down commenting. Adequately written!
More text pieces like this would make the web better.
buy generic inderal – buy methotrexate cheap methotrexate 5mg canada
amoxicillin medication – buy diovan online cheap order ipratropium for sale
buy zithromax 250mg generic – bystolic tablet buy bystolic 5mg generic