ಬೆಂಗಳೂರು.
ಕೇಂದ್ರ ಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಇವರ ವಿರುದ್ಧದ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಕ್ರಮ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಆಮ್ಲಾನ್ ಬಿಶ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ.ಇದರಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, Bengaluru ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಬೆಂಗಳೂರು ಹೊರವಲಯದ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್. ಹಿರೇಮಠ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್ಐಟಿ ರಚಿಸಲಾಗಿದೆ.
4 Comments
This is a keynote which is virtually to my verve… Diverse thanks! Faithfully where can I find the acquaintance details an eye to questions?
The reconditeness in this piece is exceptional.
¡Saludos, aventureros del riesgo !
casinosextranjero.es – experiencias Гєnicas al jugar – https://www.casinosextranjero.es/# mejores casinos online extranjeros
¡Que vivas increíbles victorias épicas !
order azithromycin 250mg generic – buy bystolic 20mg order bystolic 20mg online cheap