ಬೆಂಗಳೂರು,ಫೆ.20:
ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವಕ್ಕೆ ಅನುಸಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುವಂತೆ ಬೇಡಿಕೆ ಸಲ್ಲಿಸಿದ್ದ ಹಲವು ನಾಯಕರಿಗೆ ಹೈಕಮಾಂಡ್ ನಿರ್ಧಾರ ನಿರಾಸೆ ಮೂಡಿಸಿದೆ.
ಈ ಹಿಂದೆ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ತಾವು ಲೋಕಸಭೆ Election ಮುಗಿಯುವವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು ಇದೀಗ ಲೋಕಸಭೆ ಚುನಾವಣೆ ಮುಗಿದು ಆರು ತಿಂಗಳು ಪೂರ್ಣಗೊಂಡಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು.
ಪ್ರಮುಖವಾಗಿ ಮಂತ್ರಿಗಳಾದ ಸತೀಶ ಜಾರಕಿಹೊಳಿ ಕೆ ಎನ್ ರಾಜಣ್ಣ ಮತ್ತು ಜಿ ಪರಮೇಶ್ವರ್ ಅವರು ವರಿಷ್ಠರನ್ನು ಭೇಟಿ ಮಾಡಿ ತಕ್ಷಣವೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದ್ದರು.
ಈ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷ ಸಂಘಟನಾತ್ಮಕವಾಗಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು ಇನ್ನೊಂದೆರಡು ವಾರದಲ್ಲಿ ಹಲವು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಲಾಗುವುದು ಎಂದು ಹೇಳಿದ್ದರು. ಇದು ಡಿಕೆ ಶಿವಕುಮಾರ್ ಅವರ ಬದಲಾವಣೆಗೆ ಆಗ್ರಹಿಸುತ್ತಿದ್ದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿತ್ತು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಒಟ್ಟು ಇನ್ನೂ ಬಿಗಿಗೊಳಿಸಲು ಈ ಬಣ ತೀರ್ಮಾನಿಸಿತ್ತು. ಇದರ ಪರಿಣಾಮ ಮಂತ್ರಿ ಕೆ.ಎನ್.ರಾಜಣ್ಣ ಅವರಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮಂತ್ರಿ ಸ್ಥಾನ ತೊರೆಯುವುದಾಗಿ ಹೇಳಿದ್ದರು.
ಈ ಬೆಳವಣಿಗೆಗಳನ್ನು ಗಮನಿಸಿದಾಗ ಸದ್ಯದಲ್ಲೇ ಕೆಪಿಸಿಸಿಗೆ ನೂತನ ಸಾರಥಿ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಈಗ ಹೈಕಮಾಂಡ್ ತೆಗೆದುಕೊಂಡಿರುವ ತೀರ್ಮಾನ ಎಲ್ಲಾ ನಿರೀಕ್ಷೆಗಳನ್ನು ಹುಸಿಗೊಳಿಸಿದೆ.
ಬರುವ ಜೂನ್ ಜುಲೈ ಬೆಳಗ್ಗೆ ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ಬೃಹತ್ Bengaluru ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಈ ಚುನಾವಣೆಗೆ ಈಗಾಗಲೇ ಪ್ರದೇಶ ಕಾಂಗ್ರೆಸ್ ತಯಾರಿ ಆರಂಭಿಸಿದ್ದು ಸಂಭಾವ್ಯ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರಂತರವಾಗಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪೂರ್ಣ ಪ್ರಮಾಣದಲ್ಲಿ ಈ ಚಟುವಟಿಕೆಯಲ್ಲಿ ತೊಡಗಿದ್ದಾರೆ ಇಂತಹ ಸಮಯದಲ್ಲಿ ಅಧ್ಯಕ್ಷರ ಬದಲಾವಣೆ ಅನಗತ್ಯ ಗೊಂದಲಕ್ಕೆ ಕಾರಣವಾಗಲಿದೆ ಇದು ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳ ತಲುಪಿವೆ.
ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುವವರೆಗೆ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಮತ್ತು ವಿಧಾನ ಪರಿಷತ್ ನಾಮಕರಣ ಸದಸ್ಯರ ನೇಮಕ ಕುರಿತಂತೆ ಪಕ್ಷದ ಸಂಘಟನೆ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರನ್ನು ದೆಹಲಿಯಲ್ಲಿ ಗೃಹ ಮಂತ್ರಿ ಪರಮೇಶ್ವರ್ ಭೇಟಿ ಮಾಡಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರನ್ನು ಬದಲಾಯಿಸದಿರುವ ಹೈಕಮಾಂಡ್ ನಿರ್ಧಾರವನ್ನು ಇವರಿಗೆ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
Previous Articleಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ
Next Article ಖೈದಿಗಳಿಗೂ ಪುಣ್ಯ ಸ್ನಾನ